ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವುದು. 
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಪಘಾತ: ಪ್ರಯಾಣಿಕನಿಗಾಗಿ ಕಾಯುತ್ತಿದ್ದ ಕಾರಿಗೆ ಲಾರಿ ಡಿಕ್ಕಿ: ಯುವಕ ಸಜೀವ ದಹನ..! Video

ಕಲಬುರಗಿ ಮೂಲದ ಅಂಬದಾಸ್ (23) ಎಂಬ ಯುವಕ ಬೆಂಕಿಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಮಾರ್ಗದರ್ಶನದಂತೆ ಕುರುಬರಹಳ್ಳಿ ಮಾರ್ಗವಾಗಿ ಸಾಗುತ್ತಿತ್ತು.

ಬೆಂಗಳೂರು: ನಿಯಂತ್ರಣ ತಪ್ಪಿ ಲಾರಿಯೊಂದು ಪ್ರಯಾಣಿಕನಿಗಾಗಿ ಕಾಯುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆಯೊಂದು ನಗರದ ಕುರುಬರಹಳ್ಳಿ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದೆ.

ಕಲಬುರಗಿ ಮೂಲದ ಅಂಬದಾಸ್ (23) ಎಂಬ ಯುವಕ ಬೆಂಕಿಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಮಾರ್ಗದರ್ಶನದಂತೆ ಕುರುಬರಹಳ್ಳಿ ಮಾರ್ಗವಾಗಿ ಸಾಗುತ್ತಿತ್ತು. ಆದರೆ, ಈ ಮಾರ್ಗದಲ್ಲಿ ಇಳಿಜಾರು ರಸ್ತೆ ಇರುವುದರಿಂದ, ಈಗಾಗಲೇ ಓವರ್‌ಲೋಡ್ ಆಗಿದ್ದ ಲಾರಿ ನಿಯಂತ್ರಣ ತಪ್ಪಿದೆ.

ಈ ವೇಳೆ ಪ್ರಯಾಣಿಕನಿಗಾಗಿ ಕಾಯುತ್ತಿದ್ದ ಕಾರೊಂದಕ್ಕೆ ಲಾರಿ ಭೀಕರವಾಗಿ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಯಿಂದ ಕಾರನ್ನು ಸುಮಾರು 50ರಿಂದ 100 ಮೀಟರ್ ದೂರವರೆಗೆ ಎಳೆದೊಯ್ದಿದೆ.

ನಂತರ ಕಾರು ಸಮೀಪದಲ್ಲಿದ್ದ ಸ್ಕ್ರಾಪ್ ಗೋದಾಮಿಗೆ ನುಗ್ಗಿದ್ದು, ಡಿಕ್ಕಿಯಿಂದ ಉಂಟಾದ ಸ್ಪಾರ್ಕ್‌ನಿಂದ ಕಾರು ಹಾಗೂ ಸ್ಕ್ರಾಪ್ ಸಾಮಗ್ರಿಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ಕಾರು ಮತ್ತು ಲಾರಿ ಎರಡೂ ಹೊತ್ತಿ ಉರಿದಿವೆ.

ಘಟನೆಯ ಸಮಯದಲ್ಲಿ ಕಾರಿನೊಳಗಿದ್ದ ಚಾಲಕ ಬೆಂಕಿಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಲು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ. ಐದಾರು ಅಗ್ನಿಶಾಮಕ ವಾಹನಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು.

ಲಾರಿ ಚಾಲಕ ಅಪಘಾತ ಸಂಭವಿಸುತ್ತಿದ್ದಂತೆಯೇ ಲಾರಿಯಿಂದ ಜಿಗಿದು ಸಮೀಪದ ರಾಜಾಕಾಲುವೆಗೆ ಹಾರಿ ತನ್ನ ಜೀವವನ್ನು ಉಳಿಸಿಕೊಂಡಿದ್ದಾನೆ. ಆತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣ ಸಂಬಂಧ ರಾಜಾಜಿನಗರ ಸಂಚಾರಿ ಪೊಲೀಸರು ಚಾಲಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದು ಆಶೀರ್ವಾದದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುನ್ನೆಲೆಗೆ..!

ರಾಜ್ಯದ ಅಭಿವೃದ್ಧಿಗೆ ಕೈಜೋಡಿಸೋಣ: ಕರ್ನಾಟಕದ ಹಿತಕ್ಕಾಗಿ ಒಟ್ಟಾಗಿ ಕೆಲಸ ಮಾಡೋಣ; ರಾಜ್ಯ ಸರ್ಕಾರಕ್ಕೆ HDK ಮನವಿ

'ಕೇಂದ್ರ ಸಚಿವರಾಗಿದ್ದು ಸಾಕು, ರಾಜೀನಾಮೆ ಕೊಟ್ಟು ಬನ್ನಿ: ನೀವು ಬಂದರಷ್ಟೇ ರೈತರು- ಬಡವರು- ಜನಸಾಮಾನ್ಯರು ಉಳಿಯೋಕೆ ಸಾಧ್ಯ'

ಅನ್ನಭಾಗ್ಯ ಅಕ್ಕಿಯಿಂದ ಮಂತ್ರಾಕ್ಷತೆ: ರಾಮ ನಮ್ಮ ಬಳಿ ಇಲ್ಲವೇ ; ಸಿಎಂ ಡಿ ಕೆ ಶಿವಕುಮಾರ್

ದೇವಾಲಯಗಳ ಹುಂಡಿ ಮೇಲೆ ತೀವ್ರ ನಿಗಾ; ಕುಡಿಯುವ ನೀರಿಗೆ ಪ್ರತಿ ಕ್ಷೇತ್ರಕ್ಕೆ ತಲಾ ₹1 ಕೋಟಿ: ಸಿಎಂ ಡಿಕೆಶಿ ಹಲವು ಘೋಷಣೆ