ರಂಗಸ್ಥಳದಿಂದಲೇ ಶಿಳ್ಳೆ ಹೊಡೆದ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡ ಉಜಿರೆ ಅಶೋಕ ಭಟ್  
ರಾಜ್ಯ

'ಶಿಳ್ಳೆ ಹೊಡೆದಿದ್ಯಾಕೆ? ಇದು ಯಕ್ಷಗಾನವೊ, ಕೋಳಿ ಕಟ್ಟವೋ, ಕಂಬಳವೋ?': ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡ ಹಿರಿಯ ಕಲಾವಿದ-Video

ಕೃಷ್ಣ ಪಾತ್ರಧಾರಿಯಾಗಿ ಪಾತ್ರ ನಿರ್ವಹಿಸುತ್ತಿದ್ದ ವೇಳೆ ಪ್ರೇಕ್ಷಕರ ಕಡೆಯಿಂದ ಶಿಳ್ಳೆ ಬಂದಾಗ, ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗ್ತೇನೆ, ದೊಂಬರಾಟ ಅಲ್ಲ ಇದು. ನನಗೆ ದಾಕ್ಷಿಣ್ಯ ಇಲ್ಲ, ಇದು ಯಕ್ಷಗಾನವೊ? ಕೋಳಿ ಕಟ್ಟವೋ? ಕಂಬಳವೋ ಎಂದು ಅಶೋಕ್ ಭಟ್ ಉಜಿರೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಯಕ್ಷಗಾನ ಬಯಲಾಟದಲ್ಲಿ ಕೆಲವರು ಪ್ರೇಕ್ಷಕರು ಶಿಳ್ಳೆ ಹೊಡೆದಾಗ ಕೃಷ್ಣ ಪಾತ್ರಧಾರಿಯಾಗಿದ್ದ ಹಿರಿಯ ಕಲಾವಿದ ಉಜಿರೆ ಅಶೋಕ್ ಭಟ್ ಕೋಪಗೊಂಡು ರಂಗಸ್ಥಳದಿಂದಲೇ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದ್ದು ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೃಷ್ಣ ಪಾತ್ರಧಾರಿಯಾಗಿ ಪಾತ್ರ ನಿರ್ವಹಿಸುತ್ತಿದ್ದ ವೇಳೆ ಪ್ರೇಕ್ಷಕರ ಕಡೆಯಿಂದ ಶಿಳ್ಳೆ ಬಂದಾಗ, ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗ್ತೇನೆ, ದೊಂಬರಾಟ ಅಲ್ಲ ಇದು. ನನಗೆ ದಾಕ್ಷಿಣ್ಯ ಇಲ್ಲ, ಇದು ಯಕ್ಷಗಾನವೊ? ಕೋಳಿ ಕಟ್ಟವೋ? ಕಂಬಳವೋ ಎಂದು ಪ್ರಸಂಗದ ಮಧ್ಯೆ ಪ್ರೇಕ್ಷಕರನ್ನು ಕೃಷ್ಣ ಪಾತ್ರಧಾರಿ ಅಶೋಕ್ ಭಟ್ ಉಜಿರೆ ತರಾಟೆಗೆ ತೆಗೆದು ಕೊಂಡಿದ್ದಾರೆ.

ಕಲಾವಿದರ ಈ ಮಾತಿನ ಬಗ್ಗೆ ಪರ, ವಿರೋಧ ಯಕ್ಷಗಾನ ಪ್ರೇಮಿಗಳಿಂದ ಕೇಳಿಬರುತ್ತಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇನ್ನೇನು ಭಾಗವತರ ಪದ್ಯ ಮುಗಿದು ಅರ್ಥ ಹೇಳಲು ವೇಷಧಾರಿ ಸಿದ್ಧನಾದಾಗ ಪ್ರೆಕ್ಷಕರು ಶಿಳ್ಳೆ ಊದಿದ್ದಾರೆ. ಆಗ ಹಿರಿಯ ಕಲಾವಿದ ಉಜಿರೆ ಅಶೋಕ್ ಭಟ್ ಸಿಟ್ಟಿಗೆದ್ದು ಬುದ್ದಿಮಾತು ಹೇಳಿದ್ದು ಸದ್ಯ ಚರ್ಚೆಯ ವಿಷಯವಾಗಿದೆ.

ಉಜಿರೆ ಅಶೋಕ್ ಭಟ್ ಅವರು ಹೇಳಿದ್ದೇನು?

‘ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗ್ತೇನೆ. ದೊಂಬರಾಟ ಅಲ್ಲ ಇದು. ನಾನು ಆಗಿನಿಂದ ಚೌಕಿಯಲ್ಲಿದ್ದುಕೊಂಡು ಗಮನಿಸುತ್ತಿದ್ದೇನೆ. ಸಭ್ಯ ಸಭೆಯನ್ನು ಬಯಸುತ್ತೇನೆ. ನನಗೆ ದಾಕ್ಷಿಣ್ಯ ಯಾರದ್ದೂ ಇಲ್ಲ. ಇಲ್ಲಿ ಯಾಕೆ ಕುಣಿಯುತ್ತಿದ್ದೇವೆ ಗೊತ್ತುಂಟಾ ನಿಮಗೆ? ಯಾರು ಆಟ ಆಡಿಸುವವರು? ಏನೆಂದು ಯೋಚನೆ ಮಾಡಿದ್ದೀರಿ ನೀವು? ಈ ಕ್ಷೇತ್ರದಲ್ಲಿ ನಮ್ಮ ತಿರುಗಾಟ ಎಷ್ಟು ಗೊತ್ತಿದೆಯಾ ನಿಮಗೆ? ಏನದು ಶಿಳ್ಳೆ? ಕೋಳಿಕಟ್ಟವಾ ಅಲ್ಲ ಕಂಬಳವಾ? ಯಾರದು? ಏನು ಆಲೋಚನೆ ಮಾಡಿದ್ದೀರಿ ನೀವು.

ಯಾರದು ಶಿಳ್ಳೆ ಹಾಕಿದವ? ಆಗದಿದ್ದರೆ ಹೋಗು ಬನ್ಸ್ ತಿಂದು. ಭಾಗವತರ ಕಂಠ ಹಾಳು ಮಾಡುತ್ತೀರಾ? ಸಭ್ಯ ಸಭೆ ಅರ್ಥ ಮಾಡಿಕೊಳ್ಳಬೇಕು. ಹುಚ್ಚರನ್ನು ಬೆಳೆಸಬೇಡಿ. ಕಲಾ ಪ್ರೇಕ್ಷಕರನ್ನು ಬೆಳೆಸಿ. ನಾವು ಕೆಲಸ ಇಲ್ಲದ್ದಕ್ಕೆ ಇಲ್ಲಿ ಬಂದು ಬೆವರು ಹರಿಸಿ ಕುಣಿಯುವುದಲ್ಲ. ಅವರಿಗೆ ವಿಸಿಲ್, ದುಡ್ಡು ಕೊಟ್ಟವರು ಯಾರು? ಧಾರ್ಮಿಕ ಭಾಷಣ ಮಾಡಬೇಕೋ ಒಂದು ಗಂಟೆ ಅಥವಾ ಯಕ್ಷಗಾನ ಮಾಡಬೇಕೋ? ಏನು ಹೇಳುತ್ತೀರಿ ಹಿರಿಯರೇ? ಆಲೋಚನೆ ಮಾಡಿ’ ಎಂದು ಉಜಿರೆ ಅಶೋಕ ಭಟ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್