ಅಪಘಾತದಲ್ಲಿ ಸಂಪೂರ್ಣ ನಜ್ಜುಗುಜ್ಜಾಗಿರುವ ಕಾರು 
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಪಘಾತ: ತಿರುಪತಿಗೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ; Video

ಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ನಿಂತಿತ್ತು. ಈ ವೇಳೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲೇ ಮೃತದೇಹಗಳು ಸಿಲುಕಿಕೊಂಡಿದ್ದವು.

ಬೆಂಗಳೂರು: ಬೆಂಗಳೂರಿನಿಂದ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ದರ್ಶನಕ್ಕಾಗಿ ಹೊರಟಿದ್ದ ಕುಟುಂಬವೊಂದು ದುರಂತ ಸಾವು ಕಂಡಿದೆ.

ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (Bengaluru National Highway) ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಸಂಭವಿಸಿರುವ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ನಿಂತಿತ್ತು. ಈ ವೇಳೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲೇ ಮೃತದೇಹಗಳು ಸಿಲುಕಿಕೊಂಡಿದ್ದವು. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಮೂಲಗಳ ಪ್ರಕಾರ, ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ವಾಸವಿದ್ದ ಕುಟುಂಬ ಇಂದು ಮಧ್ಯಾಹ್ನ 12 ಗಂಟೆಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಟಿಕೆಟ್‌ ಪಡೆದುಕೊಂಡಿತ್ತು. ಆದರೆ, ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ಬಳಿಕ ಬಸ್‌ನ ಹಿಂಭಾಗಕ್ಕೆ ಸಿಲುಕಿಕೊಂಡಿದ್ದ ಕಾರನ್ನು ಪೊಲೀಸರು ಜೆಸಿಬಿ ಮೂಲಕ ಹೊರತೆಗೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel