ಕರ್ನಾಟಕ ಹೈಕೋರ್ಟ್, ರವಿಶಂಕರ ಗುರೂಜಿ 
ರಾಜ್ಯ

ಸರ್ಕಾರಿ ಜಮೀನು ಒತ್ತುವರಿ ಆರೋಪ: ರವಿಶಂಕರ ಗುರೂಜಿ ವಿರುದ್ಧ ಕೇಸು ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (BMTF) ದಾಖಲಿಸಿದ್ದ ಎಫ್‌ಐಆರ್ ಪ್ರಶ್ನಿಸಿ ರವಿಶಂಕರ್ ಗುರೂಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಬೆಂಗಳೂರು: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ರವಿಶಂಕರ ಗುರೂಜಿಯವರ(Sri Ravishankara Guruji) ವಿರುದ್ಧದ ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (BMTF) ದಾಖಲಿಸಿದ್ದ ಎಫ್‌ಐಆರ್ ಪ್ರಶ್ನಿಸಿ ರವಿಶಂಕರ್ ಗುರೂಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ರವಿಶಂಕರ್‌ ವಿರುದ್ಧದ ಪ್ರಕರಣ ರದ್ದುಪಡಿಸಿರುವ ನ್ಯಾಯಪೀಠ, ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ಪರಿಗಣಿಸುವುದಕ್ಕೆ ಮಾತ್ರ ಸೀಮಿತವಾಗಿದೆ. ಯಾವುದೇ ಸಕ್ಷಮ ನ್ಯಾಯಾಲಯದ ಮುಂದೆ ಬಾಕಿ ಇರುವ ಯಾವುದೇ ಆರೋಪಗಳಿಗೆ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶ ನೀಡಿದೆ. ಆದೇಶವದ ವಿವರವಾದ ಪ್ರತಿ ಇನ್ನೂ ಲಭ್ಯವಾಗಿಲ್ಲ.

ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದ ಸರ್ವೇ ನಂಬರ್ 46, 135, 137, 150, 160, 164/1 ಮತ್ತು 164/2ರಲ್ಲಿನ ವಿವಿಧೆಡೆ ಸರ್ಕಾರಿ ಜಮೀನು, ಕೆರೆ ಮತ್ತು ರಾಜಕಾಲುವೆ ಒತ್ತುವರಿ ಮಾಡಿದ ಆರೋಪ ರವಿಶಂಕರ್ ಗುರೂಜಿಯವರ ಆರ್ಟ ಆಫ್ ಲಿವಿಂಗ್ ಸಂಸ್ಥೆಯ ವಿರುದ್ಧ ಕೇಳಿಬಂದಿತ್ತು.

ಅದನ್ನು ರದ್ದುಪಡಿಸಲು ಕೋರಿದ್ದ ರವಿಶಂಕರ್‌ ಗುರೂಜಿ, ತಾವು ಯಾವುದೇ ಆಸ್ತಿ ಹೊಂದಿರುವ ಅಥವಾ ಯಾವುದೇ ಭೂಮಿಯನ್ನು ಅತಿಕ್ರಮಿಸಿರುವುದನ್ನು ಬಿಎಂಟಿಎಫ್‌ ವರದಿ ತೋರಿಸುವುದಿಲ್ಲ. ಖಾಸಗಿ ರಿಯಲ್ ಎಸ್ಟೇಟ್ ಕಂಪನಿ ಸೇರಿ ಕೆಲವರ ವಿರುದ್ಧ ಒತ್ತುವರಿ ಮಾಡಿರುವ ಆರೋಪವಿದೆ. ಆದರೆ, ಈ ಯಾವುದೇ ಪ್ರದೇಶ ತಮ್ಮ ಆಶ್ರಮದ ಕಾಂಪೌಂಡ್ ಒಳಗೆ ಬರುವುದಿಲ್ಲ ಎಂದು ಆಕ್ಷೇಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್