ಬಿ ವೈ ವಿಜಯೇಂದ್ರ  
ರಾಜ್ಯ

IPL ಟಿಕೆಟ್ ವಿವಾದ: ರಾಜಕೀಯ ವಲಯದಲ್ಲಿ ಕಾವೇರಿದ ಚರ್ಚೆ; ಶಾಸಕರ ಬೇಡಿಕೆಗೆ ವಿಜಯೇಂದ್ರ ವಿರೋಧ

ಇಂತಹ ಹೇಳಿಕೆಗಳ ಅವಶ್ಯಕತೆ ಇತ್ತೇ ಎಂಬುದು ನನಗಂತೂ ಅರ್ಥವಾಗುವುದಿಲ್ಲ. ನಾನಿದರ ಪರವಾಗಿ ಇಲ್ಲ. ಒಬ್ಬ ಶಾಸಕ, ಜನಪ್ರತಿನಿಧಿ ಆಗಿರುವವರು ಜನಸಾಮಾನ್ಯರಿಗಿಂತ ವಿಭಿನ್ನ, ವಿಐಪಿ ಎಂಬುದು ಖಂಡಿತವಾಗಿ ಒಳ್ಳೆಯ ಬೆಳವಣಿಗೆ ಅಲ್ಲ. ಇದಕ್ಕೆ ನನ್ನ ಬೆಂಬಲ ಇಲ್ಲ.

ಬೆಂಗಳೂರು: ಉಚಿತ ಐಪಿಎಲ್ ಟಿಕೆಟ್‌ಗಳಿಗಾಗಿ ಶಾಸಕರು ಬೇಡಿಕೆಯಿಟ್ಟಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಕಾಂಗ್ರೆಸ್‌ನ ಕೆಲವು ಸದಸ್ಯರು ಶಾಸಕರಿಗೆ ತಲಾ 5 ಟಿಕೆಟ್‌ ನೀಡಬೇಕು, ಪಂದ್ಯ ವೀಕ್ಷಣೆಗೆ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಒತ್ತಾಯಿಸಿದ್ದರು. ಸಭಾಧ್ಯಕ್ಷ ಯು.ಟಿ.ಖಾದರ್ ಕೂಡ ಇದನ್ನು ಬಲವಾಗಿ ಪ್ರತಿಪಾದಿಸಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಆಡಳಿತ ಪಕ್ಷ, ವಿಪಕ್ಷಗಳ ಶಾಸಕರ ಹೇಳಿಕೆಯನ್ನು ಗಮನಿಸಿದ್ದೇನೆ. ವೈಯಕ್ತಿಕವಾಗಿ ಅವರ ಹೇಳಿಕೆಗಳನ್ನು ಒಪ್ಪುವುದಿಲ್ಲ. ರಾಜಕಾರಣಿಗಳೆಂದರೆ ಜನಸಾಮಾನ್ಯರು ನಮ್ಮನ್ನು ಯಾವ ರೀತಿ ನೋಡುತ್ತಾರೆ ಎಂಬುದನ್ನು ಪತ್ರಿಕೆಗಳು, ಟಿ.ವಿ. ಗಳಲ್ಲಿ ನೋಡುತ್ತಿದ್ದೇವೆ. ಕಳೆದ ಬಾರಿ ಇದೇ ಐಪಿಎಲ್ ಮ್ಯಾಚ್ ಸಂದರ್ಭದಲ್ಲಿ ಆಡಳಿತ ಪಕ್ಷದ ಮೂರ್ಖತನದಿಂದ 11 ಜನ ಮುಗ್ಧರು ಪ್ರಾಣ ಕಳೆದುಕೊಂಡಿದ್ದರು. ಅದನ್ನು ರಾಜ್ಯದ, ದೇಶದ ಜನರು ಮರೆತಿಲ್ಲ.

ಈ ಸಂದರ್ಭದಲ್ಲಿ ಇಂತಹ ಹೇಳಿಕೆಗಳ ಅವಶ್ಯಕತೆ ಇತ್ತೇ ಎಂಬುದು ನನಗಂತೂ ಅರ್ಥವಾಗುವುದಿಲ್ಲ. ನಾನಿದರ ಪರವಾಗಿ ಇಲ್ಲ. ಒಬ್ಬ ಶಾಸಕ, ಜನಪ್ರತಿನಿಧಿ ಆಗಿರುವವರು ಜನಸಾಮಾನ್ಯರಿಗಿಂತ ವಿಭಿನ್ನ, ವಿಐಪಿ ಎಂಬುದು ಖಂಡಿತವಾಗಿ ಒಳ್ಳೆಯ ಬೆಳವಣಿಗೆ ಅಲ್ಲ. ಇದಕ್ಕೆ ನನ್ನ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಅಳಿವಿನಂಚಿನ ‘ಗೋಡಾವಣ’ಕ್ಕೆ ಮರುಜೀವ: ಜೈಸಲ್ಮೇರ್‌ನಲ್ಲಿ 2 Great Indian Bustards ಪಕ್ಷಿಗಳ ಬಿಡುಗಡೆ-Video

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ