ರಾಜ್ಯ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ರೂ ಮೌಲ್ಯದ ಯಂತ್ರಗಳ ದೇಣಿಗೆ!

ಸಮಾಜಮುಖಿ ಕೆಲಸಗಳಲ್ಲಿ ನಿರತವಾಗಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ಗೋಲ್ಡನ್ ಜ್ಯೂಬಿಲಿ ಫೌಂಡೇಶನ್, ಬೆಂಗಳೂರಿನ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾದ Sri Shankara Cancer Hospitalಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ದೇಣಿಗೆಯಾಗಿ ನೀಡಿದೆ.

ಬೆಂಗಳೂರು: ಸಮಾಜಮುಖಿ ಕೆಲಸಗಳಲ್ಲಿ ನಿರತವಾಗಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ಗೋಲ್ಡನ್ ಜ್ಯೂಬಿಲಿ ಫೌಂಡೇಶನ್, ಬೆಂಗಳೂರಿನ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾದ Sri Shankara Cancer Hospitalಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ದೇಣಿಗೆಯಾಗಿ ನೀಡಿದೆ.

ಸುಮಾರು 4.31 ಕೋಟಿ ಮೌಲ್ಯದ 64-ಸ್ಲೈಸ್ CT ಸ್ಕ್ಯಾನ್ ಯಂತ್ರ ಹಾಗೂ ಹಾರ್ಟ್-ಲಂಗ್ ಮಷೀನ್ ಅನ್ನು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು. ಈ ಉಪಕರಣಗಳು ಕ್ಯಾನ್ಸರ್ ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಯಲ್ಲಿ ಮಹತ್ವದ ನೆರವಾಗಲಿದ್ದು, ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಿಂದ ಬರುವ ಸಾವಿರಾರು ರೋಗಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಲ್ಐಸಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆರ್ ದೊರೆಸ್ವಾಮಿ ಅವರು ಮಾತನಾಡಿ, ಸಮಾಜಕ್ಕೆ ಉಪಕಾರವಾಗುವ ಸಂಸ್ಥೆಗಳೊಂದಿಗೆ ಕೈಜೋಡಿಸುವುದು ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನ ಮುಖ್ಯ ಉದ್ದೇಶವಾಗಿದೆ. ಈ ಆಸ್ಪತ್ರೆ ಕಡಿಮೆ ವೆಚ್ಚದಲ್ಲಿ ಮತ್ತು ಉಚಿತವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ಶ್ಲಾಘನೀಯ. ಈ ದೇಣಿಗೆಯಿಂದ ಇನ್ನಷ್ಟು ಜನರಿಗೆ ಗುಣಮಟ್ಟದ ಚಿಕಿತ್ಸೆ ಸಿಗಲಿದೆ ಎಂದು ಹೇಳಿದರು.

ಆಸ್ಪತ್ರೆಯ ಪರವಾಗಿ ಮಾತನಾಡಿದ ಡಾ. ಬಿ ಎಸ್ ಶ್ರೀನಾಥ್ ಅವರು, ಈ ಅತ್ಯಾಧುನಿಕ ಯಂತ್ರಗಳ ದೇಣಿಗೆಯಿಂದ ನಮ್ಮ ಚಿಕಿತ್ಸಾ ಸಾಮರ್ಥ್ಯ ಬಹಳಷ್ಟು ವೃದ್ಧಿಯಾಗಿದೆ. ಸಾವಿರಾರು ರೋಗಿಗಳಿಗೆ ಇದರಿಂದ ನೇರ ಪ್ರಯೋಜನವಾಗಲಿದೆ. ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ಮತ್ತು ಡಾ. ಆರ್. ದೊರೆಸ್ವಾಮಿ ಸೇರಿದಂತೆ ಅವರ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಲ್ ಐ ಸಿಯ ಹಿರಿಯ ಅಧಿಕಾರಿಗಳಾದ ಶ್ರೀ ಪುನೀತ್ ಕುಮಾರ್, ಆಶಿಶ್ ಕುಮಾರ್ ಪರಸ್ ನಾಥ್ ಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ