ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ವ್ಯಕ್ತಿಯನ್ನು ಬಂಧಿಸಿದ ದೆಹಲಿ ಪೊಲೀಸರು!

ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆ ಸಿಬ್ಬಂದಿ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

ಮೈಸೂರು: ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿ ಭೀತಿ ಮೂಡಿಸಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ದೆಹಲಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಭಾನುವಾರ ತಿಳಿಸಿವೆ.

ಆರೋಪಿ ಶ್ರೀನಿವಾಸ್ ನಗರದ ಆರನೇ ಕ್ರಾಸ್‌ನ ಎರಡನೇ ಹಂತದ ಬೃಂದಾವನ ಲೇಔಟ್‌ನಲ್ಲಿರುವ ಮನೆಯಿಂದ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ. ಆತ ಅಲ್ಪಾವಧಿಯಲ್ಲಿಯೇ ಹಲವಾರು ಬೆದರಿಕೆ ಇಮೇಲ್‌ಗಳನ್ನು ಕಳುಹಿಸುತ್ತಿದ್ದನು. ಸ್ಫೋಟಗಳ ಬಗ್ಗೆ ಎಚ್ಚರಿಕೆ ನೀಡಿ ವ್ಯಾಪಕ ಆತಂಕ ಮೂಡಿಸುತ್ತಿದ್ದನು ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಿನಿಂದ ಪದೇ ಪದೆ ಬಂದಿರುವ ಬಾಂಬ್ ಬೆದರಿಕೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ ನಂತರ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

'ತಾಂತ್ರಿಕ ಮಾಹಿತಿ ಮತ್ತು ಕಣ್ಗಾವಲಿನ ಆಧಾರದ ಮೇಲೆ, ಮೈಸೂರಿನಿಂದ ಸಂದೇಶಗಳನ್ನು ಕಳುಹಿಸಲಾಗುತ್ತಿದೆ ಎಂದು ಕಂಡುಬಂದಿದೆ. ದೆಹಲಿ ಪೊಲೀಸ್ ತಂಡವು ಹಠಾತ್ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ' ಎಂದು ಮೂಲಗಳು ತಿಳಿಸಿವೆ.

ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆ ಸಿಬ್ಬಂದಿ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

ಆರೋಪಿ ನಗರದಲ್ಲಿ ಅಡಗಿಕೊಂಡು ಇಮೇಲ್ ಮೂಲಕ ಬೆದರಿಕೆ ಸಂದೇಶಗಳನ್ನು ಕಳುಹಿಸುವುದನ್ನು ಮುಂದುವರಿಸಿದ್ದನು. ದಾಳಿಯ ಸಮಯದಲ್ಲಿ, ಈ ಸಂದೇಶಗಳನ್ನು ಕಳುಹಿಸಲು ಬಳಸಲಾಗಿದ್ದ ಹಲವಾರು ಸಿಮ್ ಕಾರ್ಡ್‌ಗಳು ಮತ್ತು ಲ್ಯಾಪ್‌ಟಾಪ್ ಅನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ಹೆಚ್ಚಿನ ವಿಚಾರಣೆ ಮತ್ತು ತನಿಖೆಗಾಗಿ ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಭಾರೀ ದುರಂತ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು

Kohli ದಾಖಲೆ ಧೂಳಿಪಟ: T20ಯಲ್ಲಿ ಹಲವು ದಾಖಲೆ ಬರೆದ ಶ್ರೇಯಸ್ ಅಯ್ಯರ್

ಚಿಕ್ಕಬಳ್ಳಾಪುರ: ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿನಿ ಮನೆಗೆ ನುಗ್ಗಿ ಕತ್ತು ಕೊಯ್ಯಲು ಯತ್ನ, ಪುಂಡರಿಂದ ಕಲ್ಲು ತೂರಾಟ!

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಕೇಂದ್ರದ 130ನೇ ಸಂವಿಧಾನ ತಿದ್ದುಪಡಿ ಬಿಲ್'ಗೆ ವಿಪಕ್ಷಗಳ ವಿರೋಧ; ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..!

ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಐತಿಹಾಸಿಕ ಗುರುದ್ವಾರ ಧ್ವಂಸ; ಭಾರತ ಖಂಡನೆ, ತೀವ್ರ ಪ್ರತಿಭಟನೆ