ಪರಪ್ಪನ ಅಗ್ರಹಾರ ಜೈಲು  
ರಾಜ್ಯ

ಪರಪ್ಪನ ಅಗ್ರಹಾರ ಜೈಲಲ್ಲಿ ಮುಂದುವರೆದ ಐಷಾರಾಮಿ ಸೌಲಭ್ಯ; ಹಿರಿಯ ಅಧಿಕಾರಿ ವಿರುದ್ಧವೇ ಕೈದಿಗಳ ಗಂಭೀರ ಆರೋಪ: Video ವೈರಲ್

ವಿಡಿಯೋ ವೈರಲ್ ಆದ ಬೆನ್ನಲ್ಲೇ ತೀವ್ರವಾಗಿ ಗರಂ ಆಗಿರುವ ಡಿಜಿಪಿ ಅಲೋಕ್ ಕುಮಾರ್ ಅವರು, ಜೈಲಿನ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮತ್ತೊಮ್ಮೆ ಸುದ್ದಿಯಲ್ಲಿದೆ. ಜೈಲಿನ ಒಳಗಡೆ ಮೊಬೈಲ್, ಟಿವಿ ಹಾಗೂ ನೆಟ್‌ಫ್ಲಿಕ್ಸ್‌ನಂತಹ ಐಷಾರಾಮಿ ಸೌಲಭ್ಯಗಳಿವೆ ಎಂದು ಬಿಂಬಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ವೈರಲ್ ಆಗಿರುವ ವೀಡಿಯೋದಲ್ಲಿ ಜೈಲಿನಲ್ಲಿರುವ ಕೆಲ ವಿಚಾರಣಾಧೀನ ಕೈದಿಗಳು ವಿಡಿಯೋ ಚಿತ್ರೀಕರಿಸುತ್ತಿರುವುದು ಕಂಡು ಬಂದಿದ್ದು, "ನಾಳೆ ಐಪಿಎಲ್ ಪಂದ್ಯವಿದೆ, ಈ ಸಲ ಕಪ್ ನಮ್ದೇ" ಎಂದು ಹೇಳುವುದರ ಜೊತೆಗೆ, ಜೈಲಿನೊಳಗೆ ಮೊಬೈಲ್‌, ಟಿವಿ ಹಾಗೂ ನೆಟ್‌ಫ್ಲಿಕ್ಸ್ ಸೌಲಭ್ಯಗಳಿವೆ ಎಂದು ಹೇಳಿರುವುದೂ ಕಂಡು ಬಂದಿದೆ. ಅಲ್ಲದೇ ಈ ಮೊಬೈಲ್ ಫೋನ್​ನ್ನು ಹಿರಿಯ ಐಪಿಎಸ್​ ಅಧಿಕಾರಿಯೇ ತಂದುಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಜೈಲಿನ ಅಧಿಕಾರಿಗಳು, ಆರೋಪಿಗಳನ್ನು ಇರಿಸಲಾಗಿದ್ದ ಬ್ಯಾರಕ್‌ನ್ನು ತೀವ್ರ ತಪಾಸಣೆಗೊಳಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಜೈಲು ಅಧಿಕಾರಿಗಳ ಕಣ್ತಪ್ಪಿಸಿ ಪ್ಲಾಸ್ಟಿಕ್ ಕವರ್ ಸುತ್ತಿ ಶೌಚಾಲಯದ ನೀರಿನ ಪೈಪ್‌ನಲ್ಲಿ ಆರೋಪಿಗಳು ಅಡಗಿಸಿಟ್ಟಿದ್ದ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ.

ಇದೀಗ ಈ ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಜೈಲು ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏತನ್ಮಧ್ಯೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ತೀವ್ರವಾಗಿ ಗರಂ ಆಗಿರುವ ಡಿಜಿಪಿ ಅಲೋಕ್ ಕುಮಾರ್ ಅವರು, ಜೈಲಿನ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಆರೋಪಿ ಕೈದಿಗಳಿದ್ದ ಬ್ಯಾರಕ್ ನೋಡಿಕೊಳ್ಳುತ್ತಿದ್ದ ಶಿವಾನಂದ ಕರ್ಲಬಟ್ಟಿ, ನಿರಂಜನ್.ಎ ಕಾಮತ್ ಹಾಗೂ ಹನುಮಂತಪ್ಪ ಹಡಪದ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಅಭಿ ಹಾಗೂ ಎಂಡ್ರೋಸ್ ಎಂಬ ಮೂವರು ಕೈದಿಗಳ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಈ ಮೂವರನ್ನೂ ಜೈಲಿನ ಕ್ವಾರಂಟೈನ್ ಸೆಲ್‌ಗೆ ಶಿಫ್ಟ್ ಮಾಡಲಾಗಿದ್ದು, ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಜೈಲಿನ ಶಿಸ್ತು ಕಾಪಾಡಲು ಇಂತಹ ಪುಂಡಾಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜೈಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!