ಸೇತುವೆಯಿಂದ ಹಳ್ಳಕ್ಕೆ ಬಿದ್ದ ಖಾಸಗಿ ಬಸ್ 
ರಾಜ್ಯ

ಶಿವಮೊಗ್ಗ: ಸೇತುವೆಯಿಂದ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; 36 ಜನರಿಗೆ ಗಾಯ

ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ ಮೂವತ್ತಾರು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್, ಕಾಗೇಹಳ್ಳದ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು, ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ.

ಅಪಘಾತದಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ ಒಟ್ಟು 36 ಜನ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರಲ್ಲಿ 25 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ಭದ್ರಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೊನೆಗೂ ಗೊಂದಲ ಪರಿಹಾರ: 3 IPL, 2 ಅಂತಾರಾಷ್ಟ್ರೀಯ ಪಂದ್ಯದ ಟಿಕೆಟ್ ನೀಡಲು KSCA ಒಪ್ಪಿಗೆ; DCM ಡಿ.ಕೆ ಶಿವಕುಮಾರ್ ಹೇಳಿಕೆ

ಬಸ್ತಾರ್ ನಿಂದ ನಕ್ಸಲಿಸಂ 'ಬಹುತೇಕ ನಿರ್ಮೂಲನೆ': ಮಾರ್ಚ್ 31ರ ಗಡುವಿಗೂ ಮುನ್ನ ಲೋಕಸಭೆಗೆ ಅಮಿತ್ ಶಾ ಮಾಹಿತಿ!

ಇತರರಿಗೆ ಹೋಲಿಸಿದರೆ ಡಾಲರ್ ಎದುರು ರೂಪಾಯಿ ಮೌಲ್ಯ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್

ಪೂರ್ವ ಏಷ್ಯಾ ಸಂಘರ್ಷ: ಅವಾಸ್ತವಿಕ, ಅಸಮಂಜಸ..; ಟ್ರಂಪ್ ರ 15 ಅಂಶಗಳ ಸಂಧಾನ ಪ್ರಸ್ತಾವನೆ ತಿರಸ್ಕರಿಸಿದ Iran

ಬಾಗಲಕೋಟೆ ಉಪಚುನಾವಣೆ: ಸಿದ್ದರಾಮಯ್ಯ, ವಿಜಯೇಂದ್ರಗೆ ಪ್ರತಿಷ್ಠೆಯ ಕಣ; ಭರ್ಜರಿ ಪ್ರಚಾರ!

SCROLL FOR NEXT