ಬೆಟ್ಟೇನಹಳ್ಳಿ ಗ್ರಾಮ 
ರಾಜ್ಯ

ದೇವನಹಳ್ಳಿ: ರಾಮನವಮಿ ಪ್ರಸಾದ ಸೇವಿಸಿ ಗ್ರಾಮಸ್ಥರು ಅಸ್ವಸ್ಥ!

ಪ್ರಸಾದ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡವರನ್ನು ಅರದೇಶನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 200ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ.ಬಹುತೇಕರು ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

ದೇವನಹಳ್ಳಿ: ಶ್ರೀರಾಮನವಮಿ ಹಬ್ಬದ ಅಂಗವಾಗಿ ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ವಿತರಿಸಿದ ಪ್ರಸಾದ ಸೇವಿಸಿ ಗ್ರಾಮಸ್ಥರು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಪ್ರಸಾದ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡವರನ್ನು ಅರದೇಶನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 200ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ.ಬಹುತೇಕರು ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟು ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಸಾದ ಸೇವಿಸಿದ ಕೆಲವು ಗ್ರಾಮಸ್ಥರಿಗೆ ಹೊಟ್ಟೆನೋವು, ವಾಂತಿ-ಭೇದಿಯಾಗಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಕೆಲವರು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಶಾ ತಂಡ, ಆರ್​ಆರ್​ಟಿ ತಂಡ, ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ಕೊಟ್ಟು ಮಾಹಿತಿ ಪಡೆದು ಚಿಕಿತ್ಸೆ ಕೊಡುತ್ತಿದ್ದಾರೆ” ಎಂದು ಲಕ್ಕಷಾ ಕೃಷ್ಣ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು.

ಅನ್ನ ಪ್ರಸಾದದಲ್ಲಿದ್ದ ಆಹಾರ ಮತ್ತು ಪದಾರ್ಥಗಳನ್ನು ಟೆಸ್ಟಿಂಗ್​ಗಾಗಿ ಕಳಿಸಿದ್ದೇವೆ. ಅಡುಗೆ ತಯಾರಿಕೆಗೆ ಬಳಸಿರುವ ನೀರನ್ನೂ ಸಹ ಟೆಸ್ಟಿಂಗ್​ಗಾಗಿ ಕಳಿಸಿದ್ದೇವೆ. ಒಂದು ದಿನದಲ್ಲಿ ರಿಪೋರ್ಟ್ ಬರಲಿದ್ದು, ಘಟನೆಗೆ ಏನು ಕಾರಣ ಎಂಬುದು ತಿಳಿದು ಬರಲಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ