ಸಾಂದರ್ಭಿಕ ಚಿತ್ರ 
ರಾಜ್ಯ

ಗುಡ್ ಫ್ರೈಡೇ, ಈಸ್ಟರ್ ಹಿನ್ನೆಲೆ: ಬೆಂಗಳೂರು-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ! ಎಲ್ಲೆಲ್ಲಿ ನಿಲುಗಡೆ?

06271 ಸಂಖ್ಯೆಯ ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 2ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಏಪ್ರಿಲ್ 3ರಂದು ಸಂಜೆ 5.30 ಕ್ಕೆ ಮಡಗಾಂವ್ ತಲುಪಲಿದೆ.

ಬೆಂಗಳೂರು: ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ಮಡಗಾಂವ್ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ.

06271 ಸಂಖ್ಯೆಯ ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 2ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಏಪ್ರಿಲ್ 3ರಂದು ಸಂಜೆ 5.30 ಕ್ಕೆ ಮಡಗಾಂವ್ ತಲುಪಲಿದೆ.

06272 ಸಂಖ್ಯೆಯ ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 5ರಂದು ಬೆಳಿಗ್ಗೆ 11 ಗಂಟೆಗೆ ಮಡಗಾಂವ್ ನಿಂದ ಹೊರಟು, ಏಪ್ರಿಲ್ 6ರಂದು ಬೆಳಗಿನ ಜಾವ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಎಲ್ಲೆಲ್ಲಿ ನಿಲ್ಲಲಿವೆ?

ಈ ವಿಶೇಷ ರೈಲುಗಳು ಮಾರ್ಗಮಧ್ಯೆ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕಾಣಕೋಣ ನಿಲ್ದಾಣಗಳಲ್ಲಿ ರೈಲು ನಿಲ್ಲಲಿದೆ.

ವಾಪಸ್ಸಾಗುವಾಗ 06272 ಸಂಖ್ಯೆಯ ರೈಲು ಯಶವಂತಪುರ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಎಸ್ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ರೈಲು ನಿಲ್ಲಲಿದೆ.

ಈ ವಿಶೇಷ ರೈಲುಗಳು ಒಟ್ಟು 19 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎರಡು ಎಸಿ 2-ಟೈರ್, ಎರಡು ಎಸಿ 3-ಟೈರ್, 9 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್