ಟ್ರಾಫಿಕ್ ಪೊಲೀಸರ ಬಾಡ್ ಕ್ಯಾಮ್ (ಸಂಗ್ರಹ ಚಿತ್ರ) 
ರಾಜ್ಯ

body-worn cams ಆಫ್ ಮಾಡಿ, ವಿನಾಕಾರಣ ವಾಹನ ತಡೆದು ಹಣ ವಸೂಲಿ: 3 ಟ್ರಾಫಿಕ್ ಪೊಲೀಸರ ಅಮಾನತು

ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ದೇಹಕ್ಕೆ ಧರಿಸಿದ್ದ ಬಾಡಿ ಕ್ಯಾಮೆರಾವನ್ನು ಆಫ್ ಮಾಡಿ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇರೆಗೆ 3 ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದ್ದು, ಸಂಬಂಧ ಇದೀಗ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಹೈ ಗ್ರೌಂಡ್ ಸಂಚಾರಿ ಪೊಲೀಸ್ ಠಾಣೆಯ ಎಎಸ್ ಐ ಸುರೇಶ್ ,ಕಾನ್ಸ್ ಟೇಬಲ್ ಗಳಾದ ಪ್ರಶಾಂತ್ ಹಾಗೂ ಸಾದಿಕ್ ಅವರನ್ನ ಸಸ್ಪೆಂಡ್ ಮಾಡಿ ಪಶ್ಚಿಮ ವಿಭಾಗ ಸಂಚಾರಿ ಡಿಸಿಪಿ ಅನೂಪ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.

ಸ್ಮಾರ್ಟ್‌ ಟ್ರಾಫಿಕ್‌ ನಿರ್ವಹಣಾ ವ್ಯವಸ್ಥೆ ಜಾರಿಗೆ ಕಾನೂನು ಸುವ್ಯವಸ್ಥೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಬಾಡಿ ಕ್ಯಾಮೆರಾ (body worn camera) ಬಳಸುವುದು ಕಡ್ಡಾಯವಾಗಿದೆ. ಆದರೆ ಈ ಮೂವರು ಸಿಬ್ಬಂದಿಗಳು ಬಾಡಿ ಕ್ಯಾಮ್ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಉದ್ದೇಶಪೂರ್ವಕವಾಗಿ ದೇಹಕ್ಕೆ ಧರಿಸಿರುವ ಕ್ಯಾಮೆರಾಗಳನ್ನು ಬಳಸದೆ ಹಣ ವಸೂಲಿ ಮಾಡಿದ್ದಕ್ಕಾಗಿ 3 ಸಂಚಾರ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ವಿನಾಕಾರಣ ಬೈಕ್ ಗಳ ನಿಲ್ಲಿಸಿ ದಾಖಲೆ ಪರಿಶೀಲನೆ

ಇನ್ನು ಸಂಚಾರ ನಿಯಮ ಉಲ್ಲಂಘನೆಗಳು ಕಂಡುಬರದಿದ್ದರೂ ಹಣ ವಸೂಲಿ ಮಾಡುವ ಉದ್ದೇಶದಿಂದ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕರ್ತವ್ಯದ ಸಮಯವನ್ನು ವಿಸ್ತರಿಸುವ ಮೂಲಕ ಅವರು ವಾಹನ ಚಾಲಕರಿಂದ ಹಣ ವಸೂಲಿ ಮಾಡಿದ್ದಾರೆ ಎಂದು ವರದಿಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹಲವಾರು ಸಾರ್ವಜನಿಕ ದೂರುಗಳ ನಂತರ ಪ್ರಾಥಮಿಕ ವಿಚಾರಣೆಯ ಆಧಾರದ ಮೇಲೆ, ಉಪ ಪೊಲೀಸ್ ಆಯುಕ್ತರು (ಟ್ರಾಫಿಕ್ ವೆಸ್ಟ್) ಅವರು ಮೂವರು ಸಂಚಾರ ಪೊಲೀಸ್ ಸಿಬ್ಬಂದಿಯನ್ನು - ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳನ್ನು - ಅಮಾನತುಗೊಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಕಿರುಕುಳ ಮತ್ತು ಅನಧಿಕೃತ ವಾಹನ ತಪಾಸಣೆ ಮತ್ತು ದಂಡದ ಹೆಸರಿನಲ್ಲಿ ಹಣ ವಸೂಲಿ ಮಾಡುವ ಬಗ್ಗೆ ಹಲವಾರು ದೂರುಗಳು ಬಂದಿವೆ.

ಜಾರಿ ಸಮಯದಲ್ಲಿ ತಮ್ಮ ದೇಹ ಧರಿಸಿರುವ ಕ್ಯಾಮೆರಾಗಳನ್ನು ಸಕ್ರಿಯವಾಗಿಡಲು ಕ್ಷೇತ್ರ ಅಧಿಕಾರಿಗಳಿಗೆ ಆದೇಶಿಸುವ ನಿಯಮಗಳನ್ನು ಈ ಮೂವರು ಪಾಲಿಸಿಲ್ಲ ಎಂದು ಅವರು ಹೇಳಿದರು.

ಬಾಡಿ ಕ್ಯಾಮರಾ ಕಡ್ಡಾಯ

ಬಾಡಿ ಕ್ಯಾಮರಾ ಧರಿಸುವುದರಿಂದ ಪೊಲೀಸರ ಮೇಲೆ ಹಲ್ಲೆ ನಡೆಸುವವರಿಗೂ ಭಯ ಹುಟ್ಟುವುದರ ಜತೆಗೆ, ಪೊಲೀಸರಿಗೂ ರಕ್ಷಣೆ ಸಿಕ್ಕಂತಾಗುತ್ತದೆ. ಆದ್ದರಿಂದ ಸರ್ಕಾರ ಬಾಡಿ ಕ್ಯಾಮೆರಾ ಖರೀದಿಸಿ ಪೊಲೀಸರಿಗೆ ನೀಡಿ ಕಡ್ಡಾಯವಾಗಿ ಧರಿಸುವಂತೆ ಆದೇಶಿಸಿದೆ.ಆದ್ರೆ, ಕೆಲವರು ಬಾಡಿ ಕ್ಯಾಮೆರಾವನ್ನು ಆಫ್ ಮಾಡಿಕೊಂಡು ಕಳ್ಳಾಟದಲ್ಲಿ ತೊಡಿಸಿಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ