ಸಾಂದರ್ಭಿಕ ಚಿತ್ರ online desk
ರಾಜ್ಯ

ಬ್ಯಾಂಕಾಕ್ ನಿಂದ ಆಗಮಿಸಿದ ಪ್ರಯಾಣಿಕನಿಂದ 6 ಕೋಟಿ ರೂ ಗೂ ಅಧಿಕ ಮೌಲ್ಯದ ಗಾಂಜಾ ವಶಕ್ಕೆ

ಅಧಿಕಾರಿಗಳ ಮಾಹಿತಿಯ ಪ್ರಕಾರ, ಮಾರ್ಚ್ 29 ಮತ್ತು 30ರಂದು ನಡೆದ ಈ ಕಾರ್ಯಾಚರಣೆಯಲ್ಲಿ, ಥಾಯ್ಲ್ಯಾಂಡ್‌ನಿಂದ ಬಂದ ಪ್ರಯಾಣಿಕರ ಚೆಕ್-ಇನ್ ಬ್ಯಾಗೇಜ್ ನಲ್ಲಿ ಅಕ್ರಮ ವಸ್ತುಗಳನ್ನು ಅಡಗಿಸಲಾಗಿತ್ತು.

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ, ಬ್ಯಾಂಕಾಕ್‌ನಿಂದ ಆಗಮಿಸಿದ್ದ ಪ್ರಯಾಣಿಕರಿಂದ ಹೆಚ್ಚಿನ ಪ್ರಮಾಣದ ಹೈಡ್ರೋಪೊನಿಕ್ ಗಾಂಜಾ ವಶಪಡಿಸಿಕೊಂಡು, ಆರು ಮಂದಿಯನ್ನು ಬಂಧಿಸಲಾಗಿದೆ.

ಅಧಿಕಾರಿಗಳ ಮಾಹಿತಿಯ ಪ್ರಕಾರ, ಮಾರ್ಚ್ 29 ಮತ್ತು 30ರಂದು ನಡೆದ ಈ ಕಾರ್ಯಾಚರಣೆಯಲ್ಲಿ, ಥಾಯ್ಲ್ಯಾಂಡ್‌ನಿಂದ ಬಂದ ಪ್ರಯಾಣಿಕರ ಚೆಕ್-ಇನ್ ಬ್ಯಾಗೇಜ್ ನಲ್ಲಿ ಅಕ್ರಮ ವಸ್ತುಗಳನ್ನು ಅಡಗಿಸಲಾಗಿತ್ತು.

ಮಂಗಳವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಕಸ್ಟಮ್ಸ್ ಇಲಾಖೆ ತಿಳಿಸಿರುವ ಮಾಹಿತಿಯ ಪ್ರಕಾರ, ಬ್ಯಾಂಕಾಕ್‌ನಿಂದ ಬಂದ 5 ಪ್ರಯಾಣಿಕರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಡೆದು, ಅವರ ಚೆಕ್-ಇನ್ ಬ್ಯಾಗ್ ನಲ್ಲಿ ಅಡಗಿಸಲಾಗಿದ್ದ 17.45 ಕಿಲೋಗ್ರಾಂ ಹೈಡ್ರೋಪೊನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯವನ್ನು ಸುಮಾರು ರೂ. 6.10 ಕೋಟಿಯಾಗಿ ಅಂದಾಜಿಸಲಾಗಿದೆ. ಇದಕ್ಕೂ ಹಿಂದಿನ ದಿನ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಮತ್ತೊಬ್ಬ ಪ್ರಯಾಣಿಕನನ್ನು ತಡೆದು, ಆತನ ಬಳಿಯಿಂದ ಗಣನೀಯ ಪ್ರಮಾಣದ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಬ್ಯಾಂಕಾಕ್‌ನಿಂದ ಬಂದಿಳಿದ ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಡೆದು, ಅಡಗಿಸಲಾಗಿದ್ದ 11.5 ಕಿಲೋಗ್ರಾಂ ಹೈಡ್ರೋಪೊನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯವನ್ನು ರೂ. 4.02 ಕೋಟಿಗಳೆಂದು ಅಂದಾಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎರಡೂ ಪ್ರಕರಣಗಳಲ್ಲಿ ಆರೋಪಿತರನ್ನೆಲ್ಲಾ ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮೂಲ ಹಾಗೂ ಅವುಗಳನ್ನು ವಿತರಿಸಲು ಉದ್ದೇಶಿಸಿದ್ದ ಜಾಲವನ್ನು ಪತ್ತೆಹಚ್ಚಲು ಮುಂದಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!