ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಾಲ್ವರ ಬಂಧನ: 25.5 ಕೋಟಿ ರೂ ಮೌಲ್ಯದ ಹೈಡ್ರೋಪೊನಿಕ್ ಗಾಂಜಾ ವಶ!

ಪ್ರಯಾಣಿಕರನ್ನು ತಪಾಸಣೆಗೆ ನಡೆಸಿದ ಅಧಿಕಾರಿಗಳು ಅವರ ಬ್ಯಾಗೇಜ್ ನಲ್ಲಿದ್ದ 18.43 ಕೋಟಿ ರೂ. ಮೌಲ್ಯದ 52.68 ಕೆ.ಜಿ ಹೈಡ್ರೋಪೊನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಶನಿವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ನಾಲ್ವರನ್ನು ಬಂಧಿಸಿದ್ದು, 21.5 ಕೋಟಿ ರೂ. ಮೊತ್ತದ ಹೈಡ್ರೋಪೊನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಬ್ಯಾಂಕಾಕ್‌ನಿಂದ ಬಂದ ಮೂವರು ಪ್ರಯಾಣಿಕರನ್ನು ತಪಾಸಣೆಗೆ ನಡೆಸಿದ ಅಧಿಕಾರಿಗಳು ಅವರ ಬ್ಯಾಗೇಜ್ ನಲ್ಲಿದ್ದ 18.43 ಕೋಟಿ ರೂ. ಮೌಲ್ಯದ 52.68 ಕೆ.ಜಿ ಹೈಡ್ರೋಪೊನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಆಗಮಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕನನ್ನು ತಡೆದು ತಪಾಸಣೆ ನಡೆಸಿದಾಗ ಆತನ ಬ್ಯಾಗೇಜ್ ನಿಂದ 3.15 ಕೋಟಿ ರೂ. ಮೌಲ್ಯದ 9 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಸದ್ಯ ಕಸ್ಟಮ್ಸ್ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿ ಎನ್‌ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ಸಕ್ರಿಯ ರಾಜಕೀಯಕ್ಕೆ ಬರುವ ಬಯಕೆ ಬಿಚ್ಚಿಟ್ಟ ಸೈನಾ ನೆಹ್ವಾಲ್; BJPಯಿಂದ ಚುನಾವಣಾ ಅಖಾಡಕ್ಕೆ ಎಂಟ್ರಿ?

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ