ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ 
ರಾಜ್ಯ

ಕುಸಿಯುವ ಅಪಾಯದಲ್ಲಿರುವ ಶಿಥಿಲಗೊಂಡ ಕಟ್ಟಡಗಳನ್ನು ಕೆಡವಲು ಆದೇಶಿಸಿದ ಜಿಬಿಎ ಮುಖ್ಯ ಆಯುಕ್ತ

ಬುಧವಾರ ಸಂಜೆ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಕಾಂಪೌಂಡ್ ಗೋಡೆ ಕುಸಿದು ಒಂದು ಮಗು ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ.

ಬೆಂಗಳೂರು: ತನ್ನ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಾಂಪೌಂಡ್ ಗೋಡೆಗಳು ಮತ್ತು ಕಟ್ಟಡಗಳನ್ನು ತಕ್ಷಣವೇ ಗುರುತಿಸಿ ಕೆಡವುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಸಂಜೆ ನಗರದಲ್ಲಿ ಸುರಿದ ಭಾರಿ ಮಳೆ, ಬಲವಾದ ಗಾಳಿ ಮತ್ತು ಆಲಿಕಲ್ಲು ಮಳೆಯಿಂದ ಉಂಟಾದ ಹಾನಿ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ಈ ಸೂಚನೆಗಳನ್ನು ನೀಡಲಾಗಿದೆ.

ಗುಡುಗು ಸಹಿತ ಮಳೆ ಮತ್ತು ಬಿರುಗಾಳಿಯು ನಗರದಲ್ಲಿ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡಿತಾದರೂ, ಹಲವೆಡೆ ವ್ಯಾಪಕ ಹಾನಿಯುಂಟು ಮಾಡಿತು. ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಕಾಂಪೌಂಡ್ ಗೋಡೆ ಕುಸಿದು ಒಂದು ಮಗು ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ.

'ಮಳೆಯ ತೀವ್ರತೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವಿಗೀಡಾಗಿದ್ದು, ಇದು ಅತ್ಯಂತ ದುರದೃಷ್ಟಕರ ಘಟನೆಯಾಗಿದೆ. ಮಳೆಯಿಂದಾಗಿ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ ಮತ್ತು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿದೆ' ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಪ್ರಕಟಣೆಯಲ್ಲಿ ತಿಳಿಸಿದೆ.

ಇದಲ್ಲದೆ, ಹಲವಾರು ಪ್ರದೇಶಗಳಲ್ಲಿ ಮರಗಳು ಮತ್ತು ಕೊಂಬೆಗಳು ಬೀಳುವ ಅಪಾಯ ಎದುರಾಗಿದೆ ಎಂದು ಅದು ಹೇಳಿದೆ.

'ಅಪಾಯಕಾರಿ ಮರಗಳು, ದುರ್ಬಲ ಕೊಂಬೆಗಳು, ಅಪಾಯಕಾರಿ ಗೋಡೆಗಳು ಮತ್ತು ಅಸುರಕ್ಷಿತ ಕಟ್ಟಡಗಳನ್ನು ತಕ್ಷಣ ಗುರುತಿಸಲು ಮತ್ತು ಯಾವುದೇ ಅಹಿತಕರ ಘಟನೆಗಳು ಮತ್ತು ಸಾರ್ವಜನಿಕರಿಗೆ ಅನಾನುಕೂಲತೆಯನ್ನು ತಪ್ಪಿಸಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಉಪ ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ' ಎಂದು ಅದು ಹೇಳಿದೆ.

ಅದರಂತೆ, ಐದು ನಗರ ಪಾಲಿಗೆಗಳ ಆಯುಕ್ತರು ಮತ್ತು ಹೆಚ್ಚುವರಿ ಆಯುಕ್ತರು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಮತ್ತು ನಗರ ನಿಗಮದ ಅಧಿಕಾರಿಗಳು ಮತ್ತು ನೌಕರರನ್ನು ಒಳಗೊಂಡ ವಿಶೇಷ ತಂಡಗಳನ್ನು ರಚಿಸಲು ಸೂಚಿಸಲಾಗಿದೆ.

ಮತ್ತಷ್ಟು ಮಳೆಯಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಲು ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ಈ ತಂಡಗಳಿಗೆ ನಿರ್ದೇಶನ ನೀಡಲಾಗಿದೆ.

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಬಿನ್ನಿಮಿಲ್ ರಸ್ತೆಯಲ್ಲಿ, ಹಳೆಯ ಗೋಡೆಯು ತೀವ್ರವಾಗಿ ದುರ್ಬಲಗೊಂಡ ಸ್ಥಿತಿಯಲ್ಲಿದ್ದು, ಕುಸಿಯುವ ಅಪಾಯದಲ್ಲಿದೆ ಎಂದು ಜಿಬಿಎ ತಿಳಿಸಿದೆ.

ಇತ್ತೀಚಿನ ಮಳೆಯ ನಂತರ, 10 ಅಡಿ ಎತ್ತರದ ಗೋಡೆಯ ಸುಮಾರು 60 ಮೀಟರ್ ಈಗಾಗಲೇ ಕುಸಿದಿತ್ತು. ಇದರ ಪರಿಣಾಮವಾಗಿ, 25 ಅಡಿ ಎತ್ತರದ, 300 ಮೀಟರ್ ಉದ್ದದ ಗೋಡೆಯ ಭಾಗವನ್ನು ಈಗ ಕೆಡವಲಾಗಿದ್ದು, 10 ಅಡಿ ಎತ್ತರದ ಗೋಡೆಯ ಹೆಚ್ಚುವರಿ 100 ಮೀಟರ್ ಭಾಗವನ್ನು ತೆಗೆದುಹಾಕುವ ಕಾರ್ಯ ಸದ್ಯ ಪ್ರಗತಿಯಲ್ಲಿದೆ.

ಪಶ್ಚಿಮ ನಗರ ಪಾಲಿಗೆ ವ್ಯಾಪ್ತಿಯಲ್ಲಿ, ಮಲ್ಲೇಶ್ವರಂನ ಮೈಸೂರು ಲ್ಯಾಂಪ್ಸ್ ಆವರಣದ 8ನೇ ಮುಖ್ಯ ರಸ್ತೆಯಲ್ಲಿ 240 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ಅಸುರಕ್ಷಿತವೆಂದು ಗುರುತಿಸಲಾಗಿದೆ. ಸೂಕ್ತ ಸುರಕ್ಷತಾ ಕ್ರಮಗಳು, ಮಾನವಶಕ್ತಿ ಮತ್ತು ಯಂತ್ರೋಪಕರಣಗಳೊಂದಿಗೆ, ಗೋಡೆಯ ಕೆಡವುವಿಕೆ ಪೂರ್ಣಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಮೂಲಕ ತೆರಳಲು ಇರಾನ್‌ಗೆ ಹಣ ಪಾವತಿಸಿದರೆ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ; ಅಮೆರಿಕ ಎಚ್ಚರಿಕೆ

'ನಾನು ಅಷ್ಟು ಹೆದರಿದ್ದೆ': ವೈಭವ್ ಸೂರ್ಯವಂಶಿ ಮುಂದೆ ಅತಿರೇಕದ ಸಂಭ್ರಮಾಚರಣೆಗೆ ಉತ್ತರ ಕೊಟ್ಟ ಕೈಲ್ ಜೇಮಿಸನ್, Video!

ವಾಣಿಜ್ಯ LPG ಸಿಲಿಂಡರ್‌ ಮೇಲಿನ GSTಶೇ. 5ಕ್ಕೆ ಇಳಿಸಿ: ಸರ್ಕಾರಕ್ಕೆ ಕರ್ನಾಟಕ ಹೋಟೆಲ್ ಸಂಘದ ಒತ್ತಾಯ

ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸಿಬ್ಬಂದಿ ನಿಯೋಜನೆ: EC ಕ್ರಮ ಮಾನ್ಯ ಎಂದ ಸುಪ್ರೀಂಕೋರ್ಟ್, TMCಗೆ ಹಿನ್ನಡೆ

ಯುದ್ಧದಲ್ಲಿ ಅಮೆರಿಕಾ ಗೆಲ್ಲುತ್ತಿಲ್ಲ ಎನ್ನುತ್ತಿರುವವರು ದ್ರೋಹಿಗಳು, ಇರಾನ್ ಅಣ್ವಸ್ತ್ರ ಹೊಂದಿದರೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಅಪಾಯ: ಟ್ರಂಪ್

SCROLL FOR NEXT