ಬಿ ವೈ ವಿಜಯೇಂದ್ರ  
ರಾಜ್ಯ

ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ: BJP

ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಪಕ್ಷದ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಈ ಗೆಲುವು, ನಮ್ಮ ಚುನಾವಣಾ ವ್ಯವಸ್ಥೆ ಹಾಗೂ ನ್ಯಾಯಾಂಗದ ಮೇಲಿನ ವಿಶ್ವಾಸಕ್ಕೆ ಸಿಕ್ಕ ಗೆಲುವು.

ಬೆಂಗಳೂರು: ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಪಕ್ಷದ ಅಭ್ಯರ್ಥಿ ಶ್ರೀ ಡಿ.ಎನ್. ಜೀವರಾಜ್ ಅವರ ಈ ಗೆಲುವು, ನಮ್ಮ ಚುನಾವಣಾ ವ್ಯವಸ್ಥೆ ಹಾಗೂ ನ್ಯಾಯಾಂಗದ ಮೇಲಿನ ವಿಶ್ವಾಸಕ್ಕೆ ಸಿಕ್ಕ ಗೆಲುವು ಎಂದು ಬಿಜೆಪಿ ಹೇಳಿದೆ.

ಶೃಂಗೇರಿ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ನಡೆದು ಅಧಿಕೃತ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹೇಳಿದ್ದಾರೆ.

ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಪಕ್ಷದ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಈ ಗೆಲುವು, ನಮ್ಮ ಚುನಾವಣಾ ವ್ಯವಸ್ಥೆ ಹಾಗೂ ನ್ಯಾಯಾಂಗದ ಮೇಲಿನ ವಿಶ್ವಾಸಕ್ಕೆ ಸಿಕ್ಕ ಗೆಲುವು. ಈ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಸಮಸ್ತ ಮತದಾರ ಬಂಧುಗಳಿಗೂ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಸತತ ಪರಿಶ್ರಮ ಮತ್ತು ದಣಿವರಿಯದ ಹೋರಾಟಕ್ಕೆ ಇಂದು ಪ್ರತಿಫಲ ದೊರೆತಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ ಮರು ಎಣಿಕೆ ನಂತರ ಫಲಿತಾಂಶ ಘೋಷಿಸಲಾಗಿದೆ. ಸಂವಿಧಾನಾತ್ಮಕ ಹೋರಾಟದ ಮೂಲಕ ಮತದಾರರ ಪ್ರತಿ ಮತಕ್ಕೂ ಗೌರವ ತಂದುಕೊಟ್ಟ ಶ್ರೀ ಜೀವರಾಜ್ ಅವರಿಗೆ ಹೃತ್ಪೂರ್ವಕ, ಹೆಮ್ಮೆಯ ಅಭಿನಂದನೆಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸತ್ಯ ಯಾವತ್ತೂ ಸೋಲುವುದಿಲ್ಲ ಎನ್ನುವುದಕ್ಕೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಪ್ರಕರಣ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವರ್ತನೆ ಬದಲಿಸಿಕೊಳ್ಳಿ, ಒಪ್ಪಂದ ಸಂಪೂರ್ಣವಾಗಿ ಪಾಲಿಸಬೇಕು: ಇರಾನ್‌ಗೆ JD ವ್ಯಾನ್ಸ್ ಎಚ್ಚರಿಕೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7ರಲ್ಲಿ 5 ಸ್ಥಾನ ಕಾಂಗ್ರೆಸ್ ಪಾಲು, ಬಿಜೆಪಿಗೆ 2, ಜೆಡಿಎಸ್‌ಗೆ ಅಡ್ಡ ಮತದಾನದ ಆಘಾತ

ಪರಿಷತ್ ಚುನಾವಣೆ: ಬಿಜೆಪಿಯ 3 ಶಾಸಕರಿಂದ ಅಡ್ಡಮತದಾನ, ಸಿಕ್ಕೇ ಸಿಗ್ತಾರೆ.. ಶಿಸ್ತುಕ್ರಮ ಗ್ಯಾರಂಟಿ: R Ashok

BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ

Bihar Horror: ಯಜಮಾನನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ, ಗುಪ್ತಾಂಗದಲ್ಲಿ ಜೀವಂತ ಬುಲೆಟ್, ಕಲ್ಲು, ಮರದ ತುಂಡು ಪತ್ತೆ!

SCROLL FOR NEXT