ನಟ ಪ್ರಥಮ್ 
ರಾಜ್ಯ

ನನಗೆ ಮಕ್ಕಳಾಗಬೇಕೆಂದು ಹರಕೆ ಕಟ್ಟಿಲ್ಲ; ನನ್ನ ದೇಶ ಬಾಂಗ್ಲಾ ವಲಸಿಗರಿಂದ ಮುಕ್ತರಾಗಬೇಕು; ಮಮತಾ ಬ್ಯಾನರ್ಜಿ ಸೋಲಬೇಕು: ಪ್ರಥಮ್!

ಪಶ್ಚಿಮ ಬಂಗಾಳದಲ್ಲಿ ಏನಾದ್ರೂ ಮಮತಾಬ್ಯಾನರ್ಜಿ ಪಕ್ಷ ಸೋತ್ರೆ ನೂರು ಜನರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ. ಸಮಾಜದಲ್ಲಿ ನನ್ನ ಗುರುತಿಗೆ ಸಿಗುವವರು ಕಷ್ಟದಲ್ಲಿದ್ದವರ ಶಕ್ತಿಮೀರಿ ಜೊತೆ ನಿಲ್ತೀನಿ .

ಬೆಂಗಳೂರು: ಪಶ್ಚಿಮ ಬಂಗಾಳ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಕನ್ನಡ ನಟ ಒಳ್ಳೆ ಹುಡುಗ ಪ್ರಥಮ್ ಮಮತ ಬ್ಯಾನರ್ಜಿ ಸೋಲಿಗಾಗಿ ಪ್ರಾರ್ಥನೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ನಟ ಪ್ರಥಮ್, ನನಗೆ ಇಂತಹ ಮಕ್ಕಳಾಗಬೇಕು, ನನ್ನ ಸಿನಿಮಾ ಗೆಲ್ಲಬೇಕು ಅಂತ ಯಾವತ್ತು ಹರಕೆ ಹೊತ್ತವನಲ್ಲ, ಆದರೆ, ಪಶ್ಚಿಮ ಬಂಗಾಳದಲ್ಲಿ ಏನಾದ್ರೂ ಮಮತಾಬ್ಯಾನರ್ಜಿ ಪಕ್ಷ ಸೋತ್ರೆ ನೂರು ಜನರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ. ಸಮಾಜದಲ್ಲಿ ನನ್ನ ಗುರುತಿಗೆ ಸಿಗುವವರು ಕಷ್ಟದಲ್ಲಿದ್ದವರ ಶಕ್ತಿಮೀರಿ ಜೊತೆ ನಿಲ್ತೀನಿ ಅಂತ ಈಶ್ವರನಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.

ನಾನು ರಾಜಕೀಯದಿಂದ ದೂರ, ನನ್ನ ದೇಶ ಬಾಂಗ್ಲಾ ವಲಸಿಗರಿಂದ ಮುಕ್ತರಾಗಬೇಕು! ನನ್ನ ದೇಶ ಚೆನ್ನಾಗಿರಬೇಕು. ಇದೊಂದೇ ಈಶ್ವರನಲ್ಲಿ ಬೇಡಿಕೆ. ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪಕ್ಷ ಸೋಲಲಿ.. ನಮ್ಮವರು ಚೆನ್ನಾಗಿರ್ಲಿ. ಖಂಡಿತಾ ಕಷ್ಟದಲ್ಲಿದ್ದವರ ಶಕ್ತಿ ಮೀರಿ ಸಹಾಯ ಮಾಡ್ತೀನಿ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

‘ಸರ್ಕಾರ ನಮ್ಮದು…’: BJP ನೇತೃತ್ವದ NDA ಸೇರುವಂತೆ ಅಭಿಜೀತ್ ದೀಪ್ಕೆಗೆ ಕೇಂದ್ರ ಸಚಿವರಿಂದ ಬಿಗ್ ಆಫರ್!

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು