ಸಾಂದರ್ಭಿಕ ಚಿತ್ರ 
ರಾಜ್ಯ

ಪತಿಯೊಂದಿಗೆ ಜಗಳ: ವಿಷ ಹಾಕಿ ಮಕ್ಕಳ ಕೊಂದ ತಾಯಿ; ತಾನೂ ಆತ್ಮಹತ್ಯೆಗೆ ಯತ್ನ..!

ತುಮಕೂರು ಜಿಲ್ಲೆಯ ಪಾವಗಡ ಮೂಲದ ಪ್ರಶಾಂತ್ ಮೊಬೈಲ್ ಫೋನ್ ಅಂಗಡಿಯಲ್ಲಿ ಮಾರಾಟ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು: ನಗರದ ಯಶವಂತಪುರ ವ್ಯಾಪ್ತಿಯ ಮತ್ತಿಕೆರೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಸಣ್ಣಪುಟ್ಟ ಕಾರಣಕ್ಕೆ ದಂಪತಿಗಳ ನಡುವೆ ನಡೆದ ಜಗಳ ಅಂತಿಮವಾಗಿ ಇಬ್ಬರು ಪ್ರಾಣಪಕ್ಷಿ ಹಾರಿಹೋಗುವಂತಾಗಿದೆ.

ನಿವಾಸಿಗಳಾದ ಪ್ರಶಾಂತ್ ಮತ್ತು ಪವಿತ್ರಾ ದಂಪತಿಗಳು ಮತ್ತಿಕೆರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ತುಮಕೂರು ಜಿಲ್ಲೆಯ ಪಾವಗಡ ಮೂಲದ ಪ್ರಶಾಂತ್ ಮೊಬೈಲ್ ಫೋನ್ ಅಂಗಡಿಯಲ್ಲಿ ಮಾರಾಟ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ದಂಪತಿಗಳು ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು, ದಂಪತಿಗಳ ನಡುವೆ ಕಳೆದ ಕೆಲ ದಿನಗಳಿಂದ ಕೌಟುಂಬಿಕ ವಿಚಾರವಾಗಿ ಅಸಮಾಧಾನವಿತ್ತು ಎನ್ನಲಾಗಿದೆ.

ಎಂದಿನಂತೆ ಪತಿ-ಪತ್ನಿ ನಡುವೆ ತೀವ್ರ ಗಲಾಟೆ ನಡೆದಿದ್ದು, ಪ್ರಶಾಂತ್ ಮನೆಯಿಂದ ಹೊರ ಹೋಗಿದ್ದಾರೆ. ಈ ವೇಳೆ ಮನನೊಂದಿದ್ದ ಪವಿತ್ರಾ ತೀವ್ರ ನಿರ್ಧಾರ ಕೈಗೊಂಡಿದ್ದಾರೆ. ತನ್ನಿಬ್ಬರು ಮಕ್ಕಳಾದ ನಿವೇದಾ (4 ವರ್ಷ) ಹಾಗೂ ನಿರ್ಮಲ್ (2 ವರ್ಷ) ಗೆ ವಿಷವುಣಿಸಿ, ಬಳಿಕ ತಾನು ಕೂಡ ವಿಷ ಸೇವಿಸಿದ್ದಾರೆ.

ತಡರಾತ್ರಿ ಮನೆಗೆ ಹಿಂತಿರುಗಿದ್ದ ಪ್ರಶಾಂತ್ ಡ್ರಾಯಿಂಗ್ ರೂಮಿನಲ್ಲಿ ಮಲಗಿದ್ದಾರೆ. ಭಾನುವಾರ ಬೆಳಿಗ್ಗೆ ಎದ್ದು ನೋಡಿದಾಗ ಪತ್ನಿ ಮತ್ತು ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಳಿಕ ನೆರೆಹೊರೆಯವರ ಸಹಾಯದಿಂದ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಈ ವೇಳೆ ಮಕ್ಕಳು ಸತ್ತಿದ್ದಾರೆ ಎಂದು ವೈದ್ಯರು ಘೋಷಿಸಿದ್ದು, ಪವಿತ್ರಾ ಪ್ರಸ್ತುತ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪವಿತ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!