ಧಗಧಗನೆ ಹೊತ್ತಿ ಉರಿದ ಕೆಎಸ್ ಆರ್ ಟಿಸಿ ಬಸ್ ಹಾಗೂ ಚಾಲಕ ಪಕ್ಕೀರಪ್ಪ 
ರಾಜ್ಯ

ಹಾವೇರಿ ಬಳಿ ಪಲ್ಲಕ್ಕಿ ಬಸ್‌ಗೆ ಬೆಂಕಿ: ಕೂದಲೆಳೆ ಅಂತರದಲ್ಲಿ 17 ಪ್ರಯಾಣಿಕರು ಪಾರು; ಚಾಲಕನ ಸಮಯ ಪ್ರಜ್ಞೆಗೆ ಪ್ರಶಂಸೆ!

ರಾಣೆಬೆನ್ನೂರು ತಾಲ್ಲೂಕಿನ ದೇವರೂಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬಸ್ ಬೆಂಗಳೂರಿನಿಂದ ಗದಗಕ್ಕೆ ತೆರಳುತಿತ್ತು ಎನ್ನಲಾಗಿದೆ.

ಹಾವೇರಿ: ರಾಜ್ಯ ಸಾರಿಗೆ ಸಂಸ್ಥೆಯ 'ಪಲ್ಲಕ್ಕಿ' ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ರಾಣೆಬೆನ್ನೂರು ತಾಲ್ಲೂಕಿನ ದೇವರೂಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬಸ್ ಬೆಂಗಳೂರಿನಿಂದ ಗದಗಕ್ಕೆ ತೆರಳುತಿತ್ತು ಎನ್ನಲಾಗಿದೆ.

ಬೆಂಗಳೂರಿನಿಂದ ಗದಗ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್‌ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು. ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದ್ದು ಎನ್ನಲಾಗಿದೆ.

ಕೂಡಲೇ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ ಬಸ್ ನ್ನು ನಿಲ್ಲಿಸಿದ್ದಾರೆ. ಅವರ ಸಮಯ ಪ್ರಜ್ಞೆಯಿಂದ ಎಲ್ಲಾ 17 ಪ್ರಯಾಣಿಕರ ಜೀವ ಉಳಿದಿದೆ.

ರಾಣೆಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್