ಶಾಸಕ ಜೀವರಾಜ್ (ಸಂಗ್ರಹ ಚಿತ್ರ) 
ರಾಜ್ಯ

ಶೃಂಗೇರಿ ಮತ ಎಣಿಕೆ ವಿವಾದ: ಅಂಚೆ ಮತಗಳಲ್ಲಿ ಅಕ್ರಮ ಆರೋಪ; ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

ಶೃಂಗೇರಿ (Sringeri) ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಆರೋಪದ ಮೇಲೆ ಶಾಸಕ ಡಿಎನ್ ಜೀವರಾಜ್ (DN Jeevaraj) ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಚಿಕ್ಕಮಗಳೂರು: ಶೃಂಗೇರಿ ಮತ ಎಣಿಕೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಅಂಚೆ ಮತಗಳಲ್ಲಿ ಅಕ್ರಮ ಆರೋಪದ ಮೇರೆಗೆ ಬಿಜೆಪಿ ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR ದಾಖಲಾಗಿದೆ ಎಂದು ತಿಳಿದುಬಂದಿದೆ.

ಶೃಂಗೇರಿ (Sringeri) ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಆರೋಪದ ಮೇಲೆ ಶಾಸಕ ಡಿಎನ್ ಜೀವರಾಜ್ (DN Jeevaraj) ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದು, ಚಿಕ್ಕಮಗಳೂರು (Chikkamagaluru) ನಗರ ಠಾಣೆಗೆ ಅಂಚೆ ಮತ ಎಣಿಕೆ ಟೇಬಲ್‌ನ ಎಜೆಂಟ್ ಆಗಿರುವ ಸುಧೀರ್ ಕುಮಾರ್ ಮುರೋಳ್ಳಿ ಅವರು ದೂರು ನೀಡಿದ್ದಾರೆ.

ದೂರಿನನ್ವಯ ಶಾಸಕ ಡಿ.ಎನ್.ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ

ದೂರಿನಲ್ಲೇನಿದೆ?

ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ, ಮತಪತ್ರಗಳಿದ್ದ ಟ್ರಂಕ್ ಓಪನ್ ಆಗಿತ್ತು, ಟ್ರಂಕಿನ ಸೀಲ್ ಓಪನ್ ಆಗಿದ್ದು, ಲಾಕ್ ಕಟ್ ಆಗಿತ್ತು. ಹೀಗಾಗಿ ಮತ ಟ್ಯಾಂಪರಿಂಗ್ ಆಗಿರುವ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಮೂವರ ವಿರುದ್ಧ ವಂಚನೆ, ಕ್ರಿಮಿನಲ್ ಹಾಗೂ ಫೋರ್ಜರಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜೇಗೌಡ 59171 ಮತ ಪಡೆದು ವಿಜಯ ಗಳಿಸಿದ್ದರು.ಬಿಜೆಪಿಯ ಜೀವರಾಜ್ ಗಳಿಸಿದ್ದು 58970 ಮತಗಳು.ಗೆಲುವಿನ ಅಂತರ 201 ಮತಗಳು. ಆಗ ಚಲಾವಣೆ ಆದ ಅಂಚೆ ಮತಗಳು 1822.ಇದರಲ್ಲಿ ಜೀವರಾಜ್ 692 ಮಾತ ಪಡೆದರೆ ರಾಜೇಗೌಡ 569 ಮತ ಗಳಿಸಿದ್ದರು.ಆಗ 279 ಮತ ತಿರಸ್ಕೃತ ಆಗಿತ್ತು.

ಗೆಲುವಿನ ಅಂತರ ತಿರಸ್ಕೃತ ಮತಗಳಿಗಿಂತ ಕಡಿಮೆ ಇದ್ದರೆ ಮರು ಎಣಿಕೆ ಕೇಳಬಹುದು.ಜೀವರಾಜ್ ಪರ ಚುನಾವಣಾ ಏಜೆಂಟರು ಮರು ಎಣಿಕೆ ಕೋರಿದರು.ಚುನಾವಣಾಧಿಕಾರಿ ನಿಯಮ ಮೀರಿ ಅದನ್ನು ತಿರಸ್ಕರಿಸಿ ರಾಜೇಗೌಡ ವಿಜೇತ ಅಭ್ಯರ್ಥಿ ಎಂದು ಘೋಷಿಸಿದರು.

ಇದರ ವಿರುದ್ಧ ಪರಾಜಿತ ಅಭ್ಯರ್ಥಿ ಜೀವರಾಜ್ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದರು. ಈ ಅರ್ಜಿ ವಿಚಾರಣೆ ನಡೆಸದೇ ವಜಾ ಮಾಡಬೇಕು ಎಂದು ರಾಜೇಗೌಡರು ನ್ಯಾಯಾಲಯವನ್ನು ಕೋರಿದರು.ವಾದ ವಿವಾದ ನಡೆದು ನ್ಯಾಯಾಲಯ ವಿಚಾರಣೆ ನಡೆಸಲು ತೀರ್ಮಾನಿಸಿತು.

ಉಚ್ಛ ನ್ಯಾಯಾಲಯದ ಈ ತೀರ್ಮಾನವನ್ನು ರಾಜೇಗೌಡರು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದರು.ಅಲ್ಲಿ ಮತ್ತೆ ವಿಚಾರಣೆ ನಡೆದು ಈ ಪ್ರಕರಣದ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿತು. ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಮರು ಎಣಿಕೆಗೆ ನ್ಯಾಯಾಲಯ ಆದೇಶಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ