ಬಿ.ಪಿ ಹರೀಶ್ 
ರಾಜ್ಯ

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ಅರೆಸ್ಟ್ ವಾರೆಂಟ್!

ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್​ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ

ದಾವಣಗೆರೆ: ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಬಂಧನಕ್ಕೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ವಾರೆಂಟ್‌ ಹೊರಡಿಸಿದೆ.

ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್​ಗೆ ಕೋರ್ಟ್ ಬಂಧನದ ವಾರಂಟ್ ಜಾರಿ ಮಾಡಿದೆ.

ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್​ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಶಾಸಕ ಹರೀಶ್ ಗೆ ಬಂಧನ ಭೀತಿ ಎದುರಾಗಿದೆ.

2023 ವಿಧಾನಸಭೆಯ ಚುನಾವಣಾ ಫಲಿತಾಂಶದ ಮರುದಿನ ದಲಿತ ಸಮಾಜದ ಬಗ್ಗೆ ಶಾಸಕ ಬಿ.ಪಿ.ಹರೀಶ್ ಅವಹೇಳನಕಾರಿಯಾಗಿ ಮಾತನಾಡಿದ್ದರು. ಹರಿಹರ ಬಿಎಸ್ಪಿ ಮುಖಂಡ ಹನುಮಂತಪ್ಪ ಎಂಬವರು ಹರಿಹರನಗರ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ; ಮೇ 7ರಂದು ಸಿಎಂ ಆಗಿ ಪ್ರಮಾಣ ವಚನ?

IPL 2026: DC ಸೋಲಿಸಿ ತಮ್ಮ 5ನೇ ಗೆಲುವು ದಾಖಲಿಸಿದ CSK; ದಾಖಲೆ ಸೃಷ್ಟಿ!

ಬೆಂಬಲ ನೀಡುವಂತೆ ವಿಜಯ್ ಮನವಿ: ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಕಾಂಗ್ರೆಸ್‌ಗೆ ಬಿಟ್ಟಿದ್ದೇವೆ: ಕೆಸಿ ವೇಣುಗೋಪಾಲ್

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 33 ರಿಂದ 37ಕ್ಕೆ ಹೆಚ್ಚಳ: ಪ್ರಧಾನಿ ಮೋದಿ ಸಂಪುಟ ಅನುಮೋದನೆ!

ಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ; ಕ್ವಿಂಟಾಲ್ ಗೆ ₹365 FRP ಹೆಚ್ಚಿಸಲು ಅನುಮೋದನೆ!

SCROLL FOR NEXT