ಈಶ್ವರ ಖಂಡ್ರೆ 
ರಾಜ್ಯ

ದುಬಾರೆಯಲ್ಲಿ 7.3 ಕೋಟಿ ರೂ ವೆಚ್ಚದಲ್ಲಿ ಶೀಘ್ರ ತೂಗು ಸೇತುವೆ ನಿರ್ಮಾಣ: ಈಶ್ವರ ಖಂಡ್ರೆ!

ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಿನಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು.

ದುಬಾರೆ: ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು ಬಂದಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ತಜ್ಞರ ಮಟ್ಟದಲ್ಲಿ ಚರ್ಚೆ ಆಗುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ನೂತನ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನೂತನ ವಾಹನಗಳಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಿನಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು.

73 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ: ಪ್ರವಾಸಿಗರ ಅನುಕೂಲಕ್ಕಾಗಿ ಮತ್ತು ದುಬಾರೆ ಹಾಡಿಯಲ್ಲಿರುವ 150 ಮನೆಗಳ ನಿವಾಸಿಗಳಿಗೆ ತುರ್ತು ಸಂದರ್ಭದಲ್ಲಿ ನಗರಕ್ಕೆ ಬರಲು ಅನುಕೂಲವಾಗುವಂತೆ 7 ಕೋಟಿ 30 ಲಕ್ಷ ರೂ. ವೆಚ್ಚದಲ್ಲಿ ಗುಣಮಟ್ಟದ ತೂಗು ಸೇತುವೆ ನಿರ್ಮಿಸಲಾಗುತ್ತಿದೆ. ಈ ಮೂಲಕ ದೀರ್ಘ ಕಾಲದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದರು.

ದುಬಾರೆ ಆನೆ ಶಿಬಿರಕ್ಕೆ 100 ವರ್ಷಗಳ ಇತಿಹಾಸವಿದೆ. ಇಲ್ಲಿ 15 ಕುಮ್ಕಿ ಆನೆಗಳಿದ್ದು, ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿವೆ. ವಿವಿಧ ಕಾರ್ಯಚರಣೆಯಲ್ಲಿ ಭಾಗಿಯಾಗುತ್ತಿವೆ. ಆನೆಗಳಿಗೆ ಪೂಜ್ಯ ಸ್ಥಾನ ಇದೆ. ಹೀಗಾಗಿ ನಾವು ವನ್ಯಜೀವಿಗಳ ಸಂರಕ್ಷಣೆಗೂ ಮುಂದಾಗಬೇಕು.ಕಾಡಿನಂಚಿನ ಜನರೊಂದಿಗೆ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಕಾನೂನು ಪಾಲಿಸಿ, ಜನರಿಗೆ ಅರಿವು ಮೂಡಿಸಿ, ಆದರೆ ಹೆದರಿಸಬೇಡಿ ಎಂದು ಕಿವಿ ಮಾತು ಹೇಳಿದರು.

ಅರಣ್ಯದಂಚಿನ ಜನರಿಗೆ ಅನುಕೂಲವಾಗುವಂತೆ ಹಲವು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಅವರ ಜೀವನೋಪಾಯಕ್ಕೆ ನೆರವಾಗುವಂತಹ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಶಾಲೆಗಳ ಅಭಿವೃದ್ಧಿಗೂ ಶ್ರಮಿಸುತ್ತಿದ್ದೇವೆ ಎಂದರು.

ಸೆಕ್ಷನ್ 4, ಡೀಮ್ಡ್ ಅರಣ್ಯ ಮೊದಲಾದ ವಿಚಾರಗಳ ಬಗ್ಗೆ ಶಾಸಕರು ಪ್ರಸ್ತಾಪಿಸಿದ್ದು, ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ ಅವರು, ಇಂದು ಯಸಳೂರಿನಲ್ಲಿ ಅರ್ಜುನ ಆನೆಯ ಸ್ಮಾರಕ ಉದ್ಘಾಟನೆಗೆ ತೆರಳುತ್ತಿರುವುದಾಗಿ ತಿಳಿಸಿದರು.

ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಯನ್ನು ಈಶ್ವರ ಖಂಡ್ರೆ ತಂದಿದ್ದಾರೆ. ಕೊಡಗಿನಲ್ಲಿ ಆನೆ-ಮಾನವ ಸಂಘರ್ಷ ಹೆಚ್ಚಾಗಿದ್ದು, ತೋಟದ ಆನೆಗಳನ್ನು ಸ್ಥಳಾಂತರಿಸಲು ಕ್ರಮ ವಹಿಸಬೇಕು, ಬೆಳೆ ಹಾನಿಗೆ ಶೀಘ್ರ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಜನಸಂಪರ್ಕ ಕಾರ್ಯಕ್ರಮದಡಿ ಫಲಾನುಭವಿಗಳಿಗೆ ಜೇನು ಪೆಟ್ಟಿಗೆ, ಕಾಡಿನಂಚಿನ ಗ್ರಾಮದ ಮಹಿಳೆಯರಿಗೆ ಹೊಲಿಗೆ ಯಂತ್ರ ಇತ್ಯಾದಿ ಸೌಲಭ್ಯಗಳನ್ನು ವಿತರಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

International Yoga Day 2026: ವಯಸ್ಸನ್ನು ಮೀರಿಸುವ ಆರೋಗ್ಯದ ಮಂತ್ರ ಯೋಗ, 50ಕ್ಕಿಂತ 70ರ ವಯಸ್ಸಿನಲ್ಲಿ ಹೆಚ್ಚು ಆರೋಗ್ಯವಂತರಾಗೋಣ: ಪ್ರಧಾನಿ ಮೋದಿ

Hormuz ಜಲಸಂಧಿಯಲ್ಲಿ ಅಮೆರಿಕಾ ಹೊಸ ಷರತ್ತು: ಭದ್ರತೆ ಬೇಕಾದರೆ ಸುಂಕ ಕಟ್ಟಿ, ಇಲ್ಲದಿದ್ದರೆ ನಿಮ್ಮ ಹಡಗುಗಳ ನೀವೇ ರಕ್ಷಿಸಿಕೊಳ್ಳಿ; ಹೊಸ ತೆರಿಗೆ ಬಾಂಬ್ ಸಿಡಿಸಿದ ಟ್ರಂಪ್

'ಎಲ್ಲದಕ್ಕೂ ಮಿತಿ ಇರಬೇಕು.. ಪ್ರಧಾನಿ ಹೇಳದೇ ಇದ್ದ ಮಾತನ್ನೂ ಕೇಳಬಲ್ಲರು': ಮೋದಿ ಬಗ್ಗೆ Shashi Tharoor 'ಮೆಚ್ಚುಗೆ', ಕಾಂಗ್ರೆಸ್ ವಾಗ್ದಾಳಿ

ಇಸ್ರೇಲ್-ಲೆಬನಾನ್ ಸಂಘರ್ಷ: ಶಾಂತಿ ಒಪ್ಪಂದ ಮುರಿಯುವ ಭೀತಿ: ಸ್ವಿಟ್ಜರ್ಲೆಂಡ್‌ಗೆ ಜೆಡಿ.ವ್ಯಾನ್ಸ್ ದೌಡು, ಇರಾನ್‌ ಸಮಾಧಾನಪಡಿಸಲು ರಾಜತಾಂತ್ರಿಕ ಕಸರತ್ತು..!

ಮೋದಿ ಕುರಿತು ಮೆಚ್ಚುಗೆ: 'ರಾಜಕೀಯ ಅಂಕ ಗಳಿಸಲು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ': ಪವನ್ ಖೇರಾಗೆ ಶಶಿ ತರೂರ್ ತಿರುಗೇಟು