ನರೇಂದ್ರ ಮೋದಿ 
ರಾಜ್ಯ

ಮೋದಿ ಸ್ವಾಗತಕ್ಕೆ BJP ಸಜ್ಜು: HAL ಏರ್‌ಪೋರ್ಟ್ ಬಳಿ ವಿಶೇಷ ಕಾರ್ಯಕ್ರಮ; 15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ ನಿರೀಕ್ಷೆ..!

ಪ್ರಧಾನಿ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 9 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಅವರನ್ನು ಬಿಜೆಪಿ ಕಾರ್ಯಕರ್ತರು ಅಭಿನಂದಿಸಲಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಇದೇ ವರ್ಷ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆಗಳು ನಡೆಯುವ ಸಾಧ್ಯತೆ ಇರುವ ಹಿನ್ನೆಲೆ, ಬಿಜೆಪಿ ಈಗಾಗಲೇ ಚುನಾವಣಾ ಸಿದ್ಧತೆಯನ್ನು ಆರಂಭಿಸಿದೆ. ಈ ನಡುವಲ್ಲೇ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಇದು ಕಾರ್ಯಕರ್ತರ ಬಲವನ್ನು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಈ ಸಂಬಂಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬುಧವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಿದ್ಧತಾ ಸಭೆ ನಡೆಯಿತು.

ಸಭೆಯಲ್ಲಿ ಬಿಜೆಪಿ ಶಾಸಕರು, ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ವಿವಿಧ ವಿಧಾನಸಭಾ ಕ್ಷೇತ್ರಗಳ ಬ್ಲಾಕ್ ಅಧ್ಯಕ್ಷರು ಭಾಗವಹಿಸಿದ್ದರು.

ಸಭೆಯ ಬಳಿಕ ಮಾತನಾಡಿದ ಅಶೋಕ್ ಅವರು, “ಪ್ರಧಾನಿ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 9 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಅವರನ್ನು ಬಿಜೆಪಿ ಕಾರ್ಯಕರ್ತರು ಅಭಿನಂದಿಸಲಿದ್ದಾರೆ” ಎಂದು ಹೇಳಿದರು.

ಮೋದಿ ಅವರ ನಾಯಕತ್ವದಿಂದಲೇ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕೇರಳದಲ್ಲೂ ಮೂರು ಸ್ಥಾನಗಳನ್ನು ಗೆದ್ದಿದ್ದೇವೆ. ಇಡೀ ದೇಶವೇ ಅವರ ನಾಯಕತ್ವವನ್ನು ಒಪ್ಪಿಕೊಂಡಿದೆ ಎಂದು ಹೇಳಿದರು.

ಮೋದಿ ಅವರು ಸುಮಾರು ಅರ್ಧ ಗಂಟೆ ಕಾಲ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದು, ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ. ಬಳಿಕ ಅವರು ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದರು.

ಇನ್ನೊಂದೆಡೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ‘ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಯಡಿಯೂರಪ್ಪ ಅವರ 50 ವರ್ಷಗಳ ಚುನಾವಣಾ ರಾಜಕೀಯ ಜೀವನವನ್ನು ಗುರುತಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಯುದ್ಧ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

US-Iran ಶಾಂತಿ ಒಪ್ಪಂದ ಎಫೆಕ್ಟ್: Hormuzನಲ್ಲಿ ಹಡಗು ಸಂಚಾರ ಚೇತರಿಕೆ, ಜಲಸಂಧಿ ದಾಟಿದ ಭಾರತದ 11 ಹಡಗುಗಳು..!

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು ‘ಕ್ಯಾಂಪ್’, ಹೆಚ್ಚಿದ ಕುತೂಹಲ

9 TMC ನೀರಿಗೆ ತಮಿಳುನಾಡು ಪಟ್ಟು: ಮುಂಗಾರು ಕೊರತೆ ಉಲ್ಲೇಖಿಸಿದ ಕರ್ನಾಟಕ ಆಕ್ಷೇಪ; ನಿರ್ಧಾರ ಮುಂದೂಡಿಕೆ..!

Cross voting ವಿವಾದ: BJP ಹೈಕಮಾಂಡ್‌ಗೆ ರಾಜ್ಯ ನಾಯಕರ ವರದಿ; ದ್ರೋಹ ಬಗೆದವರ ವಿರುದ್ಧ ಶಿಸ್ತು ಕ್ರಮಕ್ಕೆ ನಿತಿನ್ ನಬೀನ್ ಸೂಚನೆ?