ಗ್ರೇಟರ್ ಬೆಂಗಳೂರು ಪ್ರಾಧಿಕಾರ 
ರಾಜ್ಯ

GBA Election: ಜೂನ್ 20-24ರೊಳಗೆ ಐದು ಪಾಲಿಕೆಗಳ ಚುನಾವಣೆ..!

ಕಾನೂನಿನ ಪ್ರಕಾರ ರಾಜ್ಯ ಚುನಾವಣಾ ಆಯೋಗವು ಜಿಬಿಎ ಜೊತೆಗೆ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸಬೇಕಿತ್ತು. ಅದಕ್ಕಾಗಿ ಸಭೆ ನಡೆಸಲಾಗಿದೆ. ಚುನಾವಣಾ ಪ್ರಕ್ರಿಯೆಗೆ ಅಗತ್ಯವಾದ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ದಿನಾಂಕ ಘೋಷಣೆ ಮಾತ್ರ ಬಾಕಿಯಾಗಿದೆ.

ಬೆಂಗಳೂರು: ಸುಪ್ರೀಂಕೋರ್ಟ್‌ ಸೂಚನೆಯಂತೆ ಜೂ. 20 ರಿಂದ 24ರೊಳಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಶುಕ್ರವಾರ ಹೇಳಿದ್ದಾರೆ.

ಪಂಚ ಪಾಲಿಕೆಗಳ ಚುನಾವಣೆ ಸಂಬಂಧ ಇಂದು ಆಯೋಗದಲ್ಲಿ ಕರೆಯಲಾಗಿದ್ದ ಸಭೆಯ ನಂತರ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು ಈ ಕುರಿತು ಮಾಹಿತಿ ನೀಡಿದರು. ಜೂನ್ 14 ರಿಂದ 24 ರ ಒಳಗೆ ಚುನಾವಣೆ ದಿನಾಂಕ ಘೋಷಣೆ ಮಾಡುವಂತೆ ಸೂಚಿಸಿದ್ದೇನೆಂದು ಹೇಳಿದರು,

ಕಾನೂನಿನ ಪ್ರಕಾರ ರಾಜ್ಯ ಚುನಾವಣಾ ಆಯೋಗವು ಜಿಬಿಎ ಜೊತೆಗೆ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸಬೇಕಿತ್ತು. ಅದಕ್ಕಾಗಿ ಸಭೆ ನಡೆಸಲಾಗಿದೆ. ಚುನಾವಣಾ ಪ್ರಕ್ರಿಯೆಗೆ ಅಗತ್ಯವಾದ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ದಿನಾಂಕ ಘೋಷಣೆ ಮಾತ್ರ ಬಾಕಿಯಾಗಿದೆ ಎಂದು ತಿಳಿಸಿದರು.

ಜಿಬಿಎ ವತಿಯಿಂದ ಸ್ವಲ್ಪ ಕಾಲ ಚುನಾವಣೆ ಮುಂದೂಡುವಂತೆ ಮನವಿ ಮಾಡಲಾಗಿದ್ದರೂ, ಜೂನ್ 30ರೊಳಗೆ ಚುನಾವಣೆ ಪೂರ್ಣಗೊಳಿಸಬೇಕೆಂಬ ಸುಪ್ರೀಂಕೋರ್ಟ್‌ ಸ್ಪಷ್ಟ ಆದೇಶ ಇರುವುದರಿಂದ ಮುಂದೂಡುವ ಅಧಿಕಾರ ನನ್ನಗಿಲ್ಲ ಎಂದು ಚುನಾವಣಾ ಆಯುಕ್ತರು ಸ್ಪಷ್ಟಪಡಿಸಿದರು.

ಜೂ.24 ರೊಳಗೆ ಸರ್ಕಾರಿ ಪ್ರಾಯೋಜಿತ ಯಾವುದೇ ಕಾರ್ಯಕ್ರಮಗಳಿದ್ದರೆ ಶೀಘ್ರವೇ ಮುಗಿಸಲು ಸೂಚನೆ ನೀಡಿದ್ದೇನೆ. ಚುನಾವಣೆ ದಿನಾಂಕ ಶೀಘ್ರದಲ್ಲೇ ಜಾರಿ ಆಗುವ ಬಗ್ಗೆ ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿದರು.

ಜೂನ್‌ 20 ರಿಂದ ಜೂನ್‌ 24 ರೊಳಗೆ ಚುನಾವಣೆ ನಡೆಸಬೇಕಾಗಿದೆ ಆದರೆ ಯಾವ ದಿನ ಚುನಾವಣೆ ಮಾಡಬೇಕು ಅನ್ನುವುದನ್ನು ಒಂದು ವಾರದಲ್ಲಿ ನಿಗದಿ ಪಡಿಸುತ್ತೇವೆ. ಒಟ್ಟಿನಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಗಡುವಿನೊಳಗೆ ಚುನಾವಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಜಿಬಿಎ ನೂರು ಸಮಸ್ಯೆ ಹೇಳಲಿ ಅದಕ್ಕೆ ನಾವು ಕೇರ್‌ ಮಾಡಲ್ಲ. ಜೂ.20 ರಿಂದ 24ರ ನಡುವಿನ ಅವಧಿಯಲ್ಲಿ ಚುನಾವಣೆ ನಡೆಸುವುದು ಕಡ್ಡಾಯ. ಒಂದು ವಾರ ಕಾಯುತ್ತೇನೆ, ಅವರು ಹೇಳಿದರೂ ಬಿಟ್ಟರೂ ನಾನು ಈ ಅವಧಿಯಲ್ಲಿ ಚುನಾವಣೆ ನಡೆಸಿ ತೀರುತ್ತೇನೆ ಎಂದು ಹೇಳಿದರು.

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರು ಮಾತನಾಡಿ, ಚುನಾವಣೆಗೆ ಆರ್‌ಒ, ಎಆರ್‌ಒ ಹಾಗೂ ಬಿಎಲ್‌ಒ ಗಳ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯುಕ್ತರು ಸೂಚನೆ ನೀಡಿದ್ದಾರೆ ಅದನ್ನು ಪಾಲಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ವಾರ್ಡ್‌ ವಿಂಗಡಣೆ, ಮೀಸಲಾತಿ ಹಾಗೂ ಅಂತಿಮ ಮತದಾರರ ಪಟ್ಟಿ ಸಿದ್ಧಗೊಂಡಿದ್ದು, ಚುನಾವಣೆಗೆ ಬೇಕಾದ ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಇದರ ಜೊತೆಗೆ ವಾರ್ಡುವಾರು ಮತದಾನ ಕೇಂದ್ರದ ಪಟ್ಟಿಯನ್ನು ಆಯೋಗದ ಅನುಮೋದನೆ ಪಡೆದು ಪ್ರಚುರಪಡಿಸುವುದು, ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ನೇಮಕಾತಿ ಅಧಿಸೂಚನೆ ಹೊರಡಿಸುವುದು, ಮತಗಟ್ಟೆ ಸಿಬ್ಬಂದಿ ನೇಮಕ ಮತ್ತು ತರಬೇತಿ, ಮತಪೆಟ್ಟಿಗೆಗಳ ಎತ್ತುವಳಿ, ಸಾಗಾಣಿಕೆ, ಸಂಗ್ರಹಣೆ ಸಂಬಂಧ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡುವುದು.

ಮಸ್ಟರಿಂಗ್‌, ಡಿ-ಮಸ್ಟರಿಂಗ್‌ ಮತ್ತು ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸುವುದು, ಭದ್ರತಾ ಕೊಠಡಿ ವ್ಯವಸ್ಥೆ, ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್‌ ಮತ್ತು ಹೋರ್ಡಿಂಗ್‌ ಹಾಕುವುದನ್ನು ನಿಷೇಧಿಸುವುದು ಹಾಗೂ ಚುನಾವಣಾ ಪ್ರಚಾರಕ್ಕಾಗಿ ಸಭೆ ನಡೆಸಲು ರಾಜಕೀಯ ಪಕ್ಷಗಳಗೆ ಅನುಮತಿ ನೀಡುವ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!