ಸಂಗ್ರಹ ಚಿತ್ರ 
ರಾಜ್ಯ

ಕಳಪೆ ನಿರ್ವಹಣೆಗೆ ಬ್ರೇಕ್: GBAಗೆ ಸೇರಿದ ಶಾಲೆ-ಆಸ್ಪತ್ರೆಗಳು ಸರ್ಕಾರಿ ಅಧೀನಕ್ಕೆ..?

GBA ವ್ಯಾಪ್ತಿಯ ಶಾಲೆಗಳು ಕಳಪೆ ಶಿಕ್ಷಣ, ಅಪೂರ್ಣ ಮೂಲಸೌಕರ್ಯ, ಸಿಬ್ಬಂದಿ ಕೊರತೆ ಮತ್ತು ವೇತನ ವಿಳಂಬ ಸಮಸ್ಯೆಗಳಿಂದ ಬಳಲುತ್ತಿವೆ. ಆಸ್ಪತ್ರೆಗಳಲ್ಲೂ ದುರ್ಬಲ ನಿರ್ವಹಣೆ, ವೈದ್ಯಕೀಯ ಉಪಕರಣಗಳ ಕೊರತೆ ಮತ್ತು ಮೂಲಸೌಕರ್ಯ ಸಮಸ್ಯೆಗಳು ಕಂಡುಬರುತ್ತಿವೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳು ನಡೆಸುತ್ತಿರುವ ಆಸ್ಪತ್ರೆಗಳು, ಶಾಲೆಗಳು ಮತ್ತು ಕಾಲೇಜುಗಳನ್ನು ಆರೋಗ್ಯ ಹಾಗೂ ಶಿಕ್ಷಣ ಇಲಾಖೆಗಳ ವ್ಯಾಪ್ತಿಗೆ ತರಲು ಸರ್ಕಾರ ಚಿಂತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಜಿಬಿಎ ವ್ಯಾಪ್ತಿಯ ಶಾಲೆಗಳು ಕಳಪೆ ಶಿಕ್ಷಣ, ಅಪೂರ್ಣ ಮೂಲಸೌಕರ್ಯ, ಸಿಬ್ಬಂದಿ ಕೊರತೆ ಮತ್ತು ವೇತನ ವಿಳಂಬ ಸಮಸ್ಯೆಗಳಿಂದ ಬಳಲುತ್ತಿವೆ. ಆಸ್ಪತ್ರೆಗಳಲ್ಲೂ ದುರ್ಬಲ ನಿರ್ವಹಣೆ, ವೈದ್ಯಕೀಯ ಉಪಕರಣಗಳ ಕೊರತೆ ಮತ್ತು ಮೂಲಸೌಕರ್ಯ ಸಮಸ್ಯೆಗಳು ಕಂಡುಬರುತ್ತಿವೆ.

ಈ ಸಂಸ್ಥೆಗಳನ್ನು ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳ ಅಧೀನಕ್ಕೆ ತಂದರೆ ಆಡಳಿತ ಸುಧಾರಣೆ, ಪರಿಣಾಮಕಾರಿ ನಿರ್ವಹಣೆ ಹಾಗೂ ಉತ್ತಮ ಸೇವೆ ಒದಗಿಸಲು ಸಾಧ್ಯವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಶಿಕ್ಷಣ ಸಚಿವ ಮಧುಬಂಗಾರಪ್ಪ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಜಿಬಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಜೊತೆಗೆ 242 ನಮ್ಮ ಕ್ಲಿನಿಕ್‌ಗಳು, 143 ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಎರಡು ಸಾಮಾನ್ಯ ಆಸ್ಪತ್ರೆಗಳು, ಆರು ರೆಫರಲ್ ಆಸ್ಪತ್ರೆಗಳು ಹಾಗೂ 27 ಹೆರಿಗೆ ಆಸ್ಪತ್ರೆಗಳ ಜವಾಬ್ದಾರಿಯೂ ಇದೆ.

ಈ ಸಂಸ್ಥೆಗಳು ಸರ್ಕಾರದ ಇಲಾಖೆಗಳ ಅಧೀನಕ್ಕೆ ಹೋದರೆ ಪಾಲಿಕೆಗಳಿಗೆ ಕೋಟ್ಯಂತರ ರೂಪಾಯಿ ಉಳಿತಾಯವಾಗಲಿದ್ದು, ನಗರಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಸರ್ಕಾರದ ಇಲಾಖೆಗಳು ಉತ್ತಮವಾಗಿ ನಿರ್ವಹಿಸಬಹುದು ಎಂದು ಸರ್ಕಾರ ಭಾವಿಸಿದರೆ, ಅವುಗಳನ್ನು ಹಸ್ತಾಂತರಿಸಲು ನಾವು ಸಿದ್ಧ,” ಎಂದು ಜಿಬಿಎ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಂತ್ರಿಗಳ ಅನುಮೋದನೆಯ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!