ಅಪಘಾತ ಸಂಭವಿಸಿದ ಸ್ಥಳದಲ್ಲಿ ಉಪ ಪೊಲೀಸ್ ಆಯುಕ್ತ (ಸಂಚಾರ, ಪಶ್ಚಿಮ) ಅನೂಪ್ ಶೆಟ್ಟಿ. 
ರಾಜ್ಯ

ಬೆಂಗಳೂರಿನ ಹೃದಯ ಭಾಗದಲ್ಲಿ ಹೃದಯವಿದ್ರಾವಕ ಘಟನೆ: MG ರಸ್ತೆಯಲ್ಲಿ ಹಿಟ್ ಅಂಡ್ ರನ್‌ಗೆ ವ್ಯಕ್ತಿ ಬಲಿ

ಇಂದು ಬೆಳಗ್ಗೆ ಅನಿಲ್ ಕುಂಬ್ಳೆ ಜಂಕ್ಷನ್‌ನಲ್ಲಿ ಸಂಭವಿಸಿದ ಹಿಟ್ ಅಂಡ್ ಅಪಘಾತದಲ್ಲಿ 50 ವರ್ಷದ ವ್ಯಕ್ತಿ ಶ್ರೀನಿವಾಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಗರದ ಹೃದಯ ಭಾಗದವಾದ ಎಂಜಿ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಹೃದಯವಿದ್ರಾವಕ ಘಟನೆ ನಡೆದಿದ್ದು, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಅನಿಲ್ ಕುಂಬ್ಳೆ ಜಂಕ್ಷನ್‌ನಲ್ಲಿ ಸಂಭವಿಸಿದ ಹಿಟ್ ಅಂಡ್ ಅಪಘಾತದಲ್ಲಿ 50 ವರ್ಷದ ವ್ಯಕ್ತಿ ಶ್ರೀನಿವಾಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಶ್ರೀನಿವಾಸ್ ಅವರು ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅತಿವೇಗದಲ್ಲಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ನಿರ್ಲಕ್ಷ್ಯದ ಚಾಲನೆಯಿಂದ ಸಾವಿಗೆ ಕಾರಣವಾದ ಚಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106 ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಪರಾಧಿ ವಾಹನವನ್ನು ಗುರುತಿಸಲು ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

US-Iran ಶಾಂತಿ ಒಪ್ಪಂದ ಎಫೆಕ್ಟ್: Hormuzನಲ್ಲಿ ಹಡಗು ಸಂಚಾರ ಚೇತರಿಕೆ, ಜಲಸಂಧಿ ದಾಟಿದ ಭಾರತದ 11 ಹಡಗುಗಳು..!

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು ‘ಕ್ಯಾಂಪ್’, ಹೆಚ್ಚಿದ ಕುತೂಹಲ

9 TMC ನೀರಿಗೆ ತಮಿಳುನಾಡು ಪಟ್ಟು: ಮುಂಗಾರು ಕೊರತೆ ಉಲ್ಲೇಖಿಸಿದ ಕರ್ನಾಟಕ ಆಕ್ಷೇಪ; ನಿರ್ಧಾರ ಮುಂದೂಡಿಕೆ..!

Cross voting ವಿವಾದ: BJP ಹೈಕಮಾಂಡ್‌ಗೆ ರಾಜ್ಯ ನಾಯಕರ ವರದಿ; ದ್ರೋಹ ಬಗೆದವರ ವಿರುದ್ಧ ಶಿಸ್ತು ಕ್ರಮಕ್ಕೆ ನಿತಿನ್ ನಬೀನ್ ಸೂಚನೆ?