ಕಾವೇರಿ 
ರಾಜ್ಯ

ಬೆಳಗಾವಿ: ಪೊಲೀಸ್ ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌; ಹಾಸ್ಟೆಲ್‌ನಲ್ಲೇ ನೇಣಿಗೆ ಶರಣಾದ ಯುವತಿ!

ಸಾವಿಗೆ ಶರಣಾದ ಯುವತಿಯನ್ನು ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಎಂದು ಗುರುತಿಸಲಾಗಿದೆ.

ಬೆಳಗಾವಿ: ಕೇವಲ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್‌ಟೇಬಲ್‌ ಒಬ್ಬರ ಜೊತೆ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ನೇಣಿಗೆ ಶರಣಾದ ದಾರುಣ ಘಟನೆ ಬೆಳಗಾವಿಯ ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ.

ಸಾವಿಗೆ ಶರಣಾದ ಯುವತಿಯನ್ನು ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಎಂದು ಗುರುತಿಸಲಾಗಿದೆ.

ಈ ಯುವತಿ ಅಂತಿಮ ವರ್ಷದ ಬಿಎಸ್‌ಸಿ ಓದುತ್ತಿದ್ದಳು. ದಿಢೀರ್ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿದ್ದುಕೊಂಡು ಯುವತಿ ವ್ಯಾಸಾಂಗ ಮಾಡುತ್ತಿದ್ದಳು. ಇತ್ತೀಚೆಗೆ ಆಕೆಯ‌ ಕುಟುಂಬಸ್ಥರು ಪೊಲೀಸ್ ಪೇದೆಯೊಬ್ಬರ ಜೊತೆ ಮದುವೆ ನಿಶ್ಚಯ ಮಾಡಿದ್ದರು.

ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಸಿಪಿಐ ಉಸ್ಮಾನ್ ಆವಟಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ