ದೇವರಾಯನದುರ್ಗ 
ರಾಜ್ಯ

ತುಮಕೂರು: ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಸಹಾಯಕ ಇಂಜಿನಿಯರ್ ಆತ್ಮಹತ್ಯೆ; ಕಾರಣ ನಿಗೂಢ

ತುಮಕೂರಿನ ಸತ್ಯಮಂಗಲ ನಿವಾಸಿಯಾಗಿದ್ದ ಮಂಜುಪ್ರಸಾದ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ತುಮಕೂರು: ಪಾವಗಡ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುಪ್ರಸಾದ್(33) ಅವರು ಸೋಮವಾರ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಮಕೂರಿನ ಸತ್ಯಮಂಗಲ ನಿವಾಸಿಯಾಗಿದ್ದ ಮಂಜುಪ್ರಸಾದ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಅವರ ತಾಯಿ ಒಂದೂವರೆ ವರ್ಷದ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು.

ತಾಯಿಯ ನಿಧನದ ಬಳಿಕ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದ ಮಂಜುಪ್ರಸಾದ್ ಅವರು, ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು.

ಇಂದು ಬೆಳಗ್ಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಮಂಜುಪ್ರಸಾದ್, ಕೊರಟಗೆರೆಯಲ್ಲಿ ಸಂಬಂಧಿಕರಿಗೆ ಮೊಬೈಲ್ ಮತ್ತು ಮನೆಯ ಕೀ ಕೊಟ್ಟಿದ್ದರು. ಬಳಿಕ ಮೀಟಿಂಗ್ ಇದೆ ಎಂದು ಹೇಳಿ ದೇವರಾಯನದುರ್ಗಕ್ಕೆ ಬಂದು ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!