ನೆಲಮಂಗಲ: ಕ್ರಿಕೆಟ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿಕೊಂಡಿದ್ದ ಯುವಕನೋರ್ವ ಸೆಲ್ಫಿ ವಿಡಿಯೋ ಮಾಡಿ ಸಾವಿಗೆ ಶರಣಾಗಿದ್ದಾನೆ. ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ಘಟನೆ ನಡೆದಿದ್ದು ಮೃತನನ್ನು ತಮಿಳುನಾಡು ಮೂಲದ 28 ವರ್ಷದ ಶಿವಕುಮಾರ್ ಎಂದು ತಿಳಿದುಬಂದಿದೆ. IPL ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಸಾಲ ತೀರಿಸಲಾಗದೆ ಈ ಕಠಿಣ ನಿರ್ಧಾರ ಕೈಗೊಂಡಿದ್ದಾನೆ. ವಿಡಿಯೋದಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿಕೊಂಡಿದ್ದಾರೆ. ನೆಲಮಂಗಲ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.