ಸಿಎಂ ಸಿದ್ದರಾಮಯ್ಯ 
ರಾಜ್ಯ

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲಿ; ಸಿಎಂ ಸಿದ್ದರಾಮಯ್ಯ

ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ NEET-UG 2026 ಪರೀಕ್ಷೆಯನ್ನು ರದ್ದುಗೊಳಿಸಿರುವುದು ಕೇವಲ ಆಡಳಿತ ವೈಫಲ್ಯವಲ್ಲ, ಯುವಜನತೆಗೆ ಮಾಡಿದ ದ್ರೋಹವಾಗಿದೆ.

ಬೆಂಗಳೂರು: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ ಈ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ ಅವರು, ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ NEET-UG 2026 ಪರೀಕ್ಷೆಯನ್ನು ರದ್ದುಗೊಳಿಸಿರುವುದು ಕೇವಲ ಆಡಳಿತ ವೈಫಲ್ಯವಲ್ಲ, ಯುವಜನತೆಗೆ ಮಾಡಿದ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯ ಒಂದರಿಂದಲೇ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ತಿಂಗಳಗಟ್ಟಲೆ ಕಷ್ಟಪಟ್ಟು ಓದಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದರು. ಅವರ ಪೋಷಕರು ಕೋಚಿಂಗ್, ಪ್ರಯಾಣ ಹಾಗೂ ಇತರ ಸೌಲಭ್ಯಗಳಿಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದಾರೆ. ಈಗ ಪರೀಕ್ಷೆ ರದ್ದುಪಡಿಸಿರುವುದರಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪಾರದರ್ಶಕ ಹಾಗೂ ನಿಗದಿತ ಅವಧಿಯೊಳಗಿನ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಹೊಸ ಪರೀಕ್ಷಾ ವೇಳಾಪಟ್ಟಿಯನ್ನು ತಕ್ಷಣ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ಮತ್ತೆ ರಾಜ್ಯಗಳಿಗೆ ಹಿಂತಿರುಗಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಮಟ್ಟದ ಪರೀಕ್ಷೆಗಳ ನಿರ್ವಹಣೆಯಲ್ಲಿ ಪದೇಪದೇ ಕಾಣಿಸುತ್ತಿರುವ ಲೋಪಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಸಂಕಷ್ಟಕ್ಕೆ ತಳ್ಳುತ್ತಿವೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೂ ತಟ್ಟಿದ ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಪೆಟ್ರೋಲ್-ಡೀಸೆಲ್ ದರ ಲೀಟರ್‌ಗೆ ರೂ.3 ಏರಿಕೆ, 4 ವರ್ಷಗಳ ಬಳಿಕ ಇಂಧನ ದರ ಪರಿಷ್ಕರಣೆ..!

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್: ಪೆಟ್ರೋಲ್-ಡೀಸೆಲ್ ಬಳಿಕ CNG ದರವೂ ಹೆಚ್ಚಳ..!

US-Iran war: ಒಪ್ಪಂದಕ್ಕೆ ಬಾರದಿದ್ದರೆ ಒಂದೇ ದಿನದಲ್ಲಿ ಅಂತ್ಯ ಖಚಿತ; ಇರಾನ್'ಗೆ ಅಮೆರಿಕಾ ಕಠಿಣ ಎಚ್ಚರಿಕೆ

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ

ಹಿಜಾಬ್ ನಿಷೇಧ ಹಿಂಪಡೆದ ಸರ್ಕಾರ: ನ್ಯಾಯಾಂಗಕ್ಕೆ ಮಾಡಿದ ಅವಮಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

SCROLL FOR NEXT