ಡಿಕೆ ಶಿವಕುಮಾರ್  
ರಾಜ್ಯ

SIR ಮೂಲಕ SC-BC, ಅಲ್ಪಸಂಖ್ಯಾತರ ಮತ ಕಡಿತಗೊಳಿಸಲು ಯತ್ನ: DCM ಡಿ.ಕೆ ಶಿವಕುಮಾರ್ ಆರೋಪ

ಎಸ್‌ಸಿ, ಬಿಸಿ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಕಡಿತಗೊಳಿಸುವ ಉದ್ದೇಶ ಇದಾಗಿದ್ದು, ನಾವು ಪ್ರತಿಯೊಬ್ಬ ಅರ್ಹ ಮತದಾರರ ಹಕ್ಕನ್ನು ರಕ್ಷಿಸುತ್ತೇವೆ. ಭಾರತದಲ್ಲಿ ಜನಿಸಿದ ಪ್ರತಿಯೊಬ್ಬರಿಗೂ ಮತದ ಹಕ್ಕಿದೆ.

ಬೆಂಗಳೂರು: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಮೂಲಕ ಎಸ್‌ಸಿ, ಹಿಂದುಳಿದ ವರ್ಗ (BC) ಹಾಗೂ ಅಲ್ಪಸಂಖ್ಯಾತ ಮತಗಳನ್ನು ಕಡಿತಗೊಳಿಸುವ ಯತ್ನ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಮೂಲಕ ಎಸ್‌ಸಿ, ಹಿಂದುಳಿದ ವರ್ಗ (BC) ಹಾಗೂ ಅಲ್ಪಸಂಖ್ಯಾತ ಮತಗಳನ್ನು “ಕಡಿತಗೊಳಿಸುವ ಯತ್ನ” ನಡೆಯುತ್ತಿದ್ದು, ನಮ್ಮ ಸರ್ಕಾರ ಅವರ ಮತಹಕ್ಕನ್ನು ರಕ್ಷಿಸಲು ಬದ್ಧವಾಗಿದೆ ಎಂದು ಹೇಳಿದ್ದಾರೆ.

ಎಸ್‌ಐಆರ್ ಬಗ್ಗೆ ನಮಗೆ ಎಲ್ಲಾ ಮಾಹಿತಿ ಇದೆ. ನಾವು ಪಕ್ಷದ ಎಲ್ಲಾ ನಾಯಕರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಬಿಜೆಪಿ ಮತ್ತು ಜೆಡಿಎಸ್ ಕೂಡ ತಮ್ಮ ಮತಗಳನ್ನು ರಕ್ಷಿಸಿಕೊಳ್ಳಲಿ ಎಂದು ತಿಳಿಸಿದರು.

“ಎಸ್‌ಸಿ, ಬಿಸಿ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಕಡಿತಗೊಳಿಸುವ ಉದ್ದೇಶ ಇದಾಗಿದ್ದು, ನಾವು ಪ್ರತಿಯೊಬ್ಬ ಅರ್ಹ ಮತದಾರರ ಹಕ್ಕನ್ನು ರಕ್ಷಿಸುತ್ತೇವೆ. ಭಾರತದಲ್ಲಿ ಜನಿಸಿದ ಪ್ರತಿಯೊಬ್ಬರಿಗೂ ಮತದ ಹಕ್ಕಿದೆ.

ಕರ್ನಾಟಕದಲ್ಲಿ ಈಗಾಗಲೇ ಶೇಕಡಾ 88 ರಿಂದ 90 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದೆ. ಉಳಿದವರಿಗೂ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಮತದಾರರ ಪಟ್ಟಿಗಳ ಎಸ್‌ಐಆರ್ ಹಂತ-3 ಅನ್ನು ಚುನಾವಣಾ ಆಯೋಗವು 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೇ 30ರಿಂದ ಹಂತ ಹಂತವಾಗಿ ಜಾರಿಗೆ ತರುತ್ತಿದೆ. ಈ ಪ್ರಕ್ರಿಯೆ ಒಟ್ಟು 36.73 ಕೋಟಿ ಮತದಾರರನ್ನು ಒಳಗೊಂಡಿದೆ. ಕರ್ನಾಟಕವೂ ಈ ಪಟ್ಟಿಯಲ್ಲಿ ಸೇರಿದೆ.

ಪಂಜಾಬ್, ಜಾರ್ಖಂಡ್, ಕರ್ನಾಟಕ ಮತ್ತು ತೆಲಂಗಾಣ SIR ಪ್ರಕ್ರಿಯೆ ನಡೆಯುವ ರಾಜ್ಯಗಳಲ್ಲಿ ವಿರೋಧ ಪಕ್ಷದ ಆಡಳಿತದಲ್ಲಿದ್ದು, ಕರ್ನಾಟಕದಲ್ಲಿ ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 7ರಂದು ಪ್ರಕಟವಾಗಲಿದೆ.

SIR ಅನ್ನು ವಿರೋಧಿಸುವ ನಾಯಕರು ಮತ್ತು ಸಂಘಟನೆಗಳ ಒಂದು ವಿಭಾಗವು ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜ್ಯದ ಮತದಾರರ ಮತದಾನದ ಹಕ್ಕುಗಳನ್ನು ರಕ್ಷಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿತ್ತು. ಅಲ್ಲದೆ, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಮತದಾರರನ್ನು "ಹೊರಹಾಕುವ" "ಪ್ರಜಾಪ್ರಭುತ್ವ ವಿರೋಧಿ ಮತ್ತು ಅವೈಜ್ಞಾನಿಕ" ಪ್ರಕ್ರಿಯೆ ಎಂದು ಕಿಡಿಕಾರಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?