ದೇವೇಗೌಡರನ್ನು ಭೇಟಿಯಾದ ಜಿಟಿ ದೇವೇಗೌಡ 
ರಾಜ್ಯ

2028 ಚುನಾವಣೆಯಲ್ಲಿ ಜೆಡಿಎಸ್ ನಿಂದಲೇ ಸ್ಪರ್ಧೆ: ಜಿ.ಟಿ ದೇವೇಗೌಡ ಅಚ್ಚರಿ ನಡೆ!

ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೆ.ಟಿ. ದೇವೇಗೌಡ, ನಾನು ಎಲ್ಲೂ ಹೋಗಿಲ್ಲ, ಜೆಡಿಎಸ್‌ನಲ್ಲೇ (JDS) ಇದ್ದೀನಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಕೆಲವು ದಿನಗಳಿಂದ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದ ಶಾಸಕ ಜಿ.ಟಿ.ದೇವೇಗೌಡ, ಕಾಂಗ್ರೆಸ್ ಸೇರ್ತಾರೆ ಎಂಬಂತಹ ಮಾತುಗಳು ಹರಿದಾಡಿತ್ತು. ಆದರೆ ಇದೀಗ ಅಚ್ಚರಿ ರೀತಿಯಲ್ಲಿ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರನ್ನು ಭೇಟಿಯಾಗಿದ್ದು, ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೆ.ಟಿ. ದೇವೇಗೌಡ, ನಾನು ಎಲ್ಲೂ ಹೋಗಿಲ್ಲ, ಜೆಡಿಎಸ್‌ನಲ್ಲೇ (JDS) ಇದ್ದೀನಿ ಎಂದು ಸ್ಪಷ್ಟನೆ ನೀಡಿದ್ದಾರೆ.

ದೇವೇಗೌಡರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ್ದೇನೆ. ಅವರಿಗಾಗಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಪೂಜೆ ಮಾಡಿಸಿ ಪ್ರಸಾದ ಕೊಟ್ಟು ಶುಭಾಶಯ ತಿಳಿಸಿದ್ದೇನೆ. ದೇವೇಗೌಡರು ಆತ್ಮೀಯವಾಗಿ ಮಾತಾಡಿದ್ರು. ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ನಾನು ಜೆಡಿಎಸ್‌ನಲ್ಲೇ ಇದ್ದೀನಿ. ಎಲ್ಲೂ ಹೋಗಿಲ್ಲ ಎಂದರು.

2028 ಚುನಾವಣೆಯಲ್ಲಿ ನಾನು ಜೆಡಿಎಸ್‌ನಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡ್ತೀನಿ ಎಂದು ತಿಳಿಸಿದರು. ಯಾವುದೇ ಕಾರ್ಯಕ್ರಮಕ್ಕೆ ನನಗೆ ಕುಮಾರಸ್ವಾಮಿ, ನಿಖಿಲ್ ಆಗಲಿ, ಪದಾಧಿಕಾರಿಗಳು ಆಗಲಿ ಯಾರು ಕರೆದಿಲ್ಲ. ಅದಕ್ಕೆ ನಾನು ಹೋಗಿಲ್ಲ. ಮುಂದೆ ಕರೆದರೆ ನೋಡ್ತೀನಿ ಎಂದು ತಿಳಿಸಿದರು.

ಮಾಜಿ ಪ್ರಧಾನಿ ದೇವೇಗೌಡರು ಇಡೀ ದೇಶದಲ್ಲಿ ಪ್ರಧಾನಿಯಾಗಿ ಪ್ರಖ್ಯಾತಿ ಪಡೆದವರು. ಮೋದಿಯವರೇ ಅವರ ಗುಣಗಾನ ಮಾಡಿದ್ದಾರೆ. ರೈತರ ಪರ ನಿಂತು ದುಡಿದವರು. ನಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಹೋಗ್ತಿದ್ದಾರೆ. ನನಗೆ ಅವರ ಬಗ್ಗೆ ಅಪಾರ ಗೌರವ ಇದೆ. ತಾಯಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದೆ ಎಂದು ಹೇಳಿದರು.

ದೇವೇಗೌಡ್ರು ರಾಜಕೀಯ ಮಾತಾಡಿಲ್ಲ, ನಾನು ಮಾತಾಡಿಲ್ಲ. ಚೆನ್ನಾಗಿರು ಒಳ್ಳೆದಾಗಲಿ ಅಂತ ಅಶೀರ್ವಾದ ಮಾಡಿದ್ದಾರೆ. ನಾನು ಎಷ್ಟು ಪ್ರಾಮಾಣಿಕವಾಗಿ ದುಡಿದ್ದೇನೆ ಅಂತ ಅವರಿಗೆ ಗೊತ್ತಿದೆ. ಹಾಗಾಗಿ, ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್