ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 
ರಾಜ್ಯ

BLR Airport: ಮತ್ತೊಂದು ಮೈಲಿಗಲ್ಲು ಸಾಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ.

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಬೆಂಗಳೂರು 2025-26 ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ನ 134 ನೇ ಮಂಡಳಿ ಸಭೆಯಲ್ಲಿ, 2025-26ನೇ ಹಣಕಾಸು ವರ್ಷದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR Airport) ಕೈಗೊಂಡ ಪ್ರಮುಖ ಸಾಧನೆಗಳು, ಕಾರ್ಯಕ್ಷಮತೆಯ ಮುಖ್ಯಾಂಶಗಳು ಮತ್ತು ಅಭಿವೃದ್ಧಿ ಉಪಕ್ರಮಗಳನ್ನು ಪರಿಶೀಲಿಸುವಾಗ ಈ ವಿವರ ಒದಗಿಸಲಾಗಿದೆ.

ಅಧಿಕೃತ ಹೇಳಿಕೆಯ ಪ್ರಕಾರ, 2025-26ನೇ ಹಣಕಾಸು ವರ್ಷದಲ್ಲಿ ಬಿಎಲ್ಆರ್ ವಿಮಾನ ನಿಲ್ದಾಣವು 44.47 ಮಿಲಿಯನ್ ಪ್ರಯಾಣಿಕರು ಮತ್ತು 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿದೆ. ಇದು ಪ್ರಯಾಣಿಕ ಮತ್ತು ಸರಕು ವಿಭಾಗಗಳಲ್ಲಿ ಬಲವಾದ ಮತ್ತು ನಿರಂತರ ಹೆಚ್ಚಳವನ್ನು ಪ್ರತಿಬಿಂಬಿಸುತ್ತದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ದಟ್ಟಣೆ ಮತ್ತು ಸರಕು ಸಾಗಣೆಯಲ್ಲಿ ಗಮನಾರ್ಹ ಹೆಚ್ಚಳದಿಂದ ಇದು ಸಾಧ್ಯವಾಯಿತು ಎಂದು ತಿಳಿಸಿಲಾಗಿದೆ.

ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯು ಶೇ. 23.9 ರಷ್ಟು ಏರಿಕೆಯಾಗಿದ್ದು, 7.23 ಮಿಲಿಯನ್ ಪ್ರಯಾಣಿಕರಿಗೆ ತಲುಪಿದ್ದರೆ, ದೇಶೀಯ ಪ್ರಯಾಣಿಕರ ಸಂಖ್ಯೆ ಶೇ. 3.3 ರಷ್ಟು ಏರಿಕೆಯಾಗಿ 37.24 ಮಿಲಿಯನ್ ಪ್ರಯಾಣಿಕರಿಗೆ ತಲುಪಿದೆ. ಇದು ಒಟ್ಟಾರೆ ಪ್ರಯಾಣಿಕರ ಸಂಚಾರವು ವರ್ಷದಿಂದ ವರ್ಷಕ್ಕೆ ಶೇ. 6.2 ರಷ್ಟು ಏರಿಕೆಯಾಗಿದೆ.

ಭೌಗೋಳಿಕ ರಾಜಕೀಯ ಮತ್ತು ವಲಯದ ಅಡೆತಡೆಗಳ ಹೊರತಾಗಿಯೂ, ಈ ಕಾರ್ಯಕ್ಷಮತೆಯು ವ್ಯವಹಾರ ಮತ್ತು ನಾವೀನ್ಯತೆ ಕೇಂದ್ರವಾಗಿ ಬೆಂಗಳೂರಿನ ಹೆಚ್ಚುತ್ತಿರುವ ಜಾಗತಿಕ ಪ್ರಸ್ತುತತೆಯನ್ನು ಪ್ರತಿಬಿಂಬಿಸುತ್ತದೆ. ಬಿಎಲ್ಆರ್ ವಿಮಾನ ನಿಲ್ದಾಣ ಪ್ರಸ್ತುತ 78 ಕ್ಕೂ ಹೆಚ್ಚು ದೇಶೀಯ ಮತ್ತು 34 ಅಂತಾರಾಷ್ಟ್ರೀಯ ತಾಣಗಳಿಗೆ ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ" ಎಂದು ಹೇಳಿಕೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!