ನಮ್ಮ ಮೆಟ್ರೊ ನೇರಳೆ ಮಾರ್ಗ 
ರಾಜ್ಯ

ಮೇ 17ಕ್ಕೆ ನಮ್ಮ ಮೆಟ್ರೋ ಕಾಮಗಾರಿ: ನೇರಳೆ ಮಾರ್ಗ 2 ಗಂಟೆ ಬಂದ್‌; ಇಲ್ಲಿದೆ ಪೂರ್ಣ ಮಾಹಿತಿ...

ನಾಳೆ ಭಾನುವಾರ ಬೆಳಗ್ಗೆ ಏಳರಿಂದ ಒಂಬತ್ತರವರೆಗೆ ಎರಡು ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ಹೊಸಹಳ್ಳಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ತಾಂತ್ರಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ.

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ನಾಳೆ ಮೇ 17ರ ಭಾನುವಾರದಂದು ತಾಂತ್ರಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸಹಳ್ಳಿ-ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಒಟ್ಟು ಎರಡು ಗಂಟೆಗಳ ಅವಧಿಗೆ ರೈಲು ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ ಭಾನುವಾರ ಬೆಳಗ್ಗೆ ಏಳರಿಂದ ಒಂಬತ್ತರವರೆಗೆ ಎರಡು ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ಹೊಸಹಳ್ಳಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ತಾಂತ್ರಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ. ನೇರಳೆ ಮಾರ್ಗದ ಇತರ ಭಾಗಗಳು ಹಾಗೂ ಹಸಿರು, ಹಳದಿ ಮಾರ್ಗಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಸಂಚಾರ ಸ್ಥಗಿತ

ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸೆಂಟ್ರಲ್ ಕಾಲೇಜಿನ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೊ ನಿಲ್ದಾಣಗಳ ನಡುವೆ ತುರ್ತು ಮತ್ತು ಅಗತ್ಯ ಸುರಕ್ಷತಾ ಕಾಮಗಾರಿಗಳು ನಡೆಯಲಿವೆ. ಈ ತಾಂತ್ರಿಕ ಕಾರಣದಿಂದಾಗಿ, ನಾಳೆ ಬೆಳಗ್ಗೆ 2 ಗಂಟೆಗಳ ಕಾಲ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿವೆ. ಬೆಳಗ್ಗೆ 9:00 ಗಂಟೆಯ ನಂತರ ಈ ಮಾರ್ಗದಲ್ಲಿ ಎಂದಿನಂತೆ ರೈಲುಗಳು ಸಂಚರಿಸಲಿವೆ. ಪರ್ಯಾಯ ಮಾರ್ಗಗಳಲ್ಲಿ ಎಂದಿನಂತೆ ಸಂಚಾರ ಲಭ್ಯವಿರುತ್ತದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಇನ್ನುಳಿದ ಮಾರ್ಗಗಳಲ್ಲಿ ಬೆಳಗ್ಗೆ 7 ರಿಂದ ರೈಲು ಸೇವೆಗಳು ಲಭ್ಯವಿರಲಿವೆ. ಚಲ್ಲಘಟ್ಟದಿಂದ ವಿಜಯನಗರದವರೆಗೆ ಮತ್ತು ಎಂ.ಜಿ. ರಸ್ತೆಯಿಂದ ವೈಟ್‌ಫೀಲ್ಡ್‌ (ಕಾಡುಗೋಡಿ) ನಿಲ್ದಾಣಗಳ ನಡುವೆ ರೈಲುಗಳು ಎಂದಿನ ವೇಳಾಪಟ್ಟಿಯಂತೆ ಚಲಿಸಲಿವೆ. ಮಾದಾವರ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ (ಹಸಿರು ಮಾರ್ಗ) ನಡುವಿನ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ (ಹಳದಿ ಮಾರ್ಗ) ನಡುವಿನ ಮೆಟ್ರೋ ರೈಲುಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳು

ಶ್ರೀರಂಗಪಟ್ಟಣದಲ್ಲಿ ಬೃಹತ್ ಭೂ ಹಗರಣ: ಬರೋಬ್ಬರಿ 200 ಎಕರೆ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ; 9 ಜನರ ಬಂಧನ!

Video: ವಿಶ್ವದ ಹಲವು ದೇಶಗಳು ಯುವಕರಿಗೆ ತರಬೇತಿ ನೀಡಲು RSS ಸಹಕಾರ ಕೇಳುತ್ತಿವೆ: ಮೋಹನ್ ಭಾಗವತ್

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಅಯೋಧ್ಯೆ ರಾಮಮಂದಿರ ಬಳಿಕ ಬದರಿನಾಥ ದೇವಾಲಯದಲ್ಲೂ ದೇಣಿಗೆ ಕಳ್ಳತನ ಆರೋಪ, ತನಿಖೆಗೆ ಆದೇಶ!