ಸಾಂದರ್ಭಿಕ ಚಿತ್ರ 
ರಾಜ್ಯ

ಮಾಲೀಕನ ಮನೆಗೇ ಕನ್ನ: 27 ಲಕ್ಷ ರೂ ದೋಚಿ ಸಹಾಯಕ ಪರಾರಿ..!

ನವರತ್ನ ಕುಮಾರ್ ಅವರು ಅಂಗಡಿಯಿಂದ ತಂದಿದ್ದ ಹಣವನ್ನು ಬ್ಯಾಂಕ್‌ಗೆ ಜಮಾ ಮಾಡಲು ಮನೆಯಲ್ಲಿ ಇಟ್ಟಿದ್ದರು. ಬುಧವಾರ ರಾತ್ರಿ ಪತ್ನಿ ಜೊತೆ ಸಮೀಪದ ಔಷಧ ಅಂಗಡಿಗೆ ತೆರಳಿದ್ದರು.

ಬೆಂಗಳೂರು: ಯಶವಂತಪುರ ಪೊಲೀಸ್ ವ್ಯಾಪ್ತಿಯಲ್ಲಿರುವ ಆಭರಣ ವ್ಯಾಪಾರಿಯೊಬ್ಬರ ಮನೆಯಿಂದ ಸಹಾಯಕನೇ 27 ಲಕ್ಷ ರೂ. ನಗದು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

63 ವರ್ಷದ ಜ್ಯುವೆಲರಿ ಅಂಗಡಿ ಮಾಲೀಕ ಎನ್. ನವರತ್ನ ಕುಮಾರ್ ಅವರ ಮನೆಯಲ್ಲಿ ಬಾಬು ಸಿಂಗ್ ಎಂಬಾತ ಕಳೆದ 18 ತಿಂಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.

ನವರತ್ನ ಕುಮಾರ್ ಅವರು ಅಂಗಡಿಯಿಂದ ತಂದಿದ್ದ ಹಣವನ್ನು ಬ್ಯಾಂಕ್‌ಗೆ ಜಮಾ ಮಾಡಲು ಮನೆಯಲ್ಲಿ ಇಟ್ಟಿದ್ದರು. ಬುಧವಾರ ರಾತ್ರಿ ಪತ್ನಿ ಜೊತೆ ಸಮೀಪದ ಔಷಧ ಅಂಗಡಿಗೆ ತೆರಳಿದ್ದರು.

ಈ ವೇಳೆ ಮನೆಯಲ್ಲಿ ಯಾರು ಇಲ್ಲದಿದ್ದ ಅವಕಾಶವನ್ನು ಬಳಸಿಕೊಂಡ ಆರೋಪಿ ಬಾಬು ಸಿಂಗ್, ಮನೆಯಲ್ಲಿದ್ದ 27 ಲಕ್ಷ ರೂ. ನಗದು ತೆಗೆದುಕೊಂಡು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದಂಪತಿ ಮನೆಗೆ ಮರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿರುವುದು ತಿಳಿದುಬಂದಿದೆ. ಬಳಿಕ ಸ್ಪೇರ್ ಕೀ ಬಳಸಿ ಒಳಗೆ ಪ್ರವೇಶಿಸಿದಾಗ ಆರೋಪಿ ನಾಪತ್ತೆಯಾಗಿರುವುದು, ಹಣವೂ ಇಲ್ಲದಿರುವುದು ತಿಳಿದುಬಂದಿದೆ. ಫೋನ್‌ಗೆ ಕರೆ ಮಾಡಿದರೂ ಸಂಪರ್ಕಕ್ಕೆ ಸಿಕ್ಕಿಲ್ಲ. ಫೋನ್ ಸ್ವಿಚ್ ಆಫ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ BNS ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ರಾಜಸ್ಥಾನಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!