ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಕೆರೆಯಲ್ಲಿ ಮಾನವ ತಲೆಬುರುಡೆ, ಅಸ್ಥಿಪಂಜರ ಅವಶೇಷಗಳು ಪತ್ತೆ..!

ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಅಸ್ಥಿಪಂಜರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಗಳೂರು ಕೆರೆ ಬಳಿ ಮಾನವ ತಲೆಬುರುಡೆ ಮತ್ತು ಅಸ್ಥಿಪಂಜರದ ಅವಶೇಷಗಳು ಶನಿವಾರ ಪತ್ತೆಯಾಗಿದ್ದು, ಇದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

ಕೆರೆ ಬಳಿ ಕುರಿ ಮೇಯಿಸುತ್ತಿದ್ದ ಕುರಿಗಾಹಿಗಳು ಈ ಅಸ್ಥಿಪಂಜರಗಳನ್ನು ಕಂಡು ತಕ್ಷಣವೇ ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಅಸ್ಥಿಪಂಜರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿದ್ದಾರೆ.

ಸ್ಥಳ ಪರಿಶೀಲಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಅವರು ಮಾತನಾಡಿ, ತಲೆಬುರುಡೆ ಮತ್ತು ಅಸ್ಥಿಪಂಜರಗಳು ಚದುರಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಾಯಿಗಳು ಅವುಗಳನ್ನು ಎಳೆದಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳದಲ್ಲಿ ಮಹಿಳೆಯ ಸೀರೆ ಸೇರಿದಂತೆ ಕೆಲ ವಸ್ತ್ರಗಳು ಪತ್ತೆಯಾಗಿರುವುದರಿಂದ ಮೃತದೇಹ ಮಹಿಳೆಯದ್ದಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೇಸಿಗೆಯ ಕಾರಣ ಕೆರೆಯಲ್ಲಿ ನೀರಿನ ಮಟ್ಟ ಇಳಿದಿದ್ದರಿಂದ ಈ ಅಸ್ಥಿಪಂಜರಗಳು ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಅಸ್ಥಿಪಂಜರಗಳು ಪುರುಷನದ್ದೇ ಅಥವಾ ಮಹಿಳೆಯದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. FSL ವರದಿ ಬಂದ ಬಳಿಕ ನಿಖರ ಮಾಹಿತಿ ದೊರೆಯಲಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ