ಯುವ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ 
ರಾಜ್ಯ

NEET UG paper leak: ಮೇ 21 ರಂದು ಲೋಕಭವನಕ್ಕೆ ಯುವ ಕಾಂಗ್ರೆಸ್ ಮುತ್ತಿಗೆ!

ಕೇಂದ್ರವು ವಿದ್ಯಾರ್ಥಿಗಳನ್ನು ನರಕಕ್ಕೆ ತಳ್ಳಿದೆ, ನಾಲ್ಕು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಾತ್ರ ಪ್ರಶ್ನೆಪತ್ರಿಕೆ ಸೋರಿಕೆ ನಡೆಯುತ್ತಿದೆ ಎಂದು ಕಿಡಿಕಾರಿದರು.

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ಮೇ 21 ರಂದು ಬೆಂಗಳೂರಿನ ಲೋಕ ಭವನಕ್ಕೆ ಮುತ್ತಿಗೆ ಹಾಕಲಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಾವಧಿಯಲ್ಲಿ 89 ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ವಿದ್ಯಾರ್ಥಿಗಳ ಸಂಕಷ್ಟವನ್ನು ಹೆಚ್ಚಿಸಿದೆ ಎಂದು ಆರೋಪಿಸಿದರು.

ಕೇಂದ್ರವು ವಿದ್ಯಾರ್ಥಿಗಳನ್ನು ನರಕಕ್ಕೆ ತಳ್ಳಿದೆ, ನಾಲ್ಕು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಾತ್ರ ಪ್ರಶ್ನೆಪತ್ರಿಕೆ ಸೋರಿಕೆ ನಡೆಯುತ್ತಿದೆ ಎಂದು ಕಿಡಿಕಾರಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಆಹ್ವಾನಿಸಿದ್ದೇವೆ ಎಂದು ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಮಾಹಿತಿ ನೀಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ನಂತರ, ಮೋದಿ ಆಡಳಿತದಲ್ಲಿ ನಡೆದಿರುವುದು ಇಂಡಿಯನ್ ಪೇಪರ್ ಲೀಕ್ ಎಂದು ಅವರು ವ್ಯಂಗ್ಯವಾಡಿದರು. ರಾಜಸ್ಥಾನ ಶಿಕ್ಷಣ ಸಚಿವರ ಆಪ್ತರು ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದೆ ಇದ್ದಾರೆ" ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!