ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರಧಾನಿ ಮೋದಿ, ಕೇಂದ್ರ ಸರ್ಕಾರಕ್ಕೆ ದೂರದೃಷ್ಟಿ ಕೊರತೆ; ಹಣದುಬ್ಬರ ಏರಿಕೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ಮುಗಿದ 16 ದಿನಗಳ ನಂತರ ಈ ಹೆಚ್ಚಳವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಬೆಂಗಳೂರು: ಇತ್ತೀಚಿನ ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ದೂರದೃಷ್ಟಿಯ ಕೊರತೆಯಿದ್ದು, ದೇಶದಲ್ಲಿ ಹಣದುಬ್ಬರ ಏರಿಕೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸುವುದನ್ನು ವಿಳಂಬ ಮಾಡಿತು. ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ಭಯವೇ ಈ ವಿಳಂಬಕ್ಕೆ ಕಾರಣ ಎಂದರು.

"ಚುನಾವಣೆಗೆ ಮುನ್ನ ಮೋದಿ ಹೀಗೆ ಮಾಡಿದ್ದರೆ, ಅದರ ಪರಿಣಾಮ ಅವರಿಗೆ ತಿಳಿದಿರುತ್ತಿತ್ತು. ಬೆಲೆ ಏರಿಕೆಯು ಚುನಾವಣೆಯಲ್ಲಿ ತಮ್ಮ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಅವರಿಗೆ ಗೊತ್ತಿತ್ತು. ಹೀಗಾಗಿ ಇಷ್ಟು ದಿನ ಈ ಮಾಹಿತಿಯನ್ನು ಮುಚ್ಚಿದ್ದರು. ಈಗ, ಚುನಾವಣೆ ಮುಗಿದ ತಕ್ಷಣ, ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಬೆಲೆಗಳನ್ನು ಹೆಚ್ಚಿಸಲಾಗಿದೆ ಎಂದು ಟೀಕಿಸಿದರು.

ಬಿಜೆಪಿ ನೇತೃತ್ವದ ಸರ್ಕಾರ ಮತ್ತು ಮೋದಿಗೆ ದೂರದೃಷ್ಟಿ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದಿಂದಾಗಿ ಹಣದುಬ್ಬರ ಏರಿಕೆಯಾಗುತ್ತಿದೆ. ಬಡವರಿಗೆ ಅವರ ಹಕ್ಕು ಸಿಗುತ್ತಿಲ್ಲ. ಇದರ ವಿರುದ್ಧ ಧ್ವನಿ ಎತ್ತುವುದಾಗಿ ಖರ್ಗೆ ತಿಳಿಸಿದರು.

"ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ, ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ ಇಂಧನ ಚಿಲ್ಲರೆ ವ್ಯಾಪಾರಿಗಳು ಹೆಚ್ಚುತ್ತಿರುವ ನಷ್ಟದ ನಡುವೆ, ನಾಲ್ಕು ವರ್ಷಗಳಿಗೂ ಹೆಚ್ಚು ಅವಧಿಯಲ್ಲಿ ಮೊದಲ ಬಾರಿಗೆ ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಲೀಟರ್‌ಗೆ 3 ರೂ. ಹೆಚ್ಚಿಸಲಾಗಿದೆ.

ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ಮುಗಿದ 16 ದಿನಗಳ ನಂತರ ಈ ಹೆಚ್ಚಳವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel