ಸಾಂದರ್ಭಿಕ ಚಿತ್ರ 
ರಾಜ್ಯ

Mysuru Expressway: ಮದ್ದೂರು ಬಳಿ ಖಾಸಗಿ ಕಂಪನಿ ಉದ್ಯೋಗಿಯ ಕಾರು ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ!

ಮೈಸೂರು ಮೂಲದ ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು, ಸಂಜೆ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ಸಂಗ್ರಹಿಸಿದ ಹಣವನ್ನು ತಲುಪಿಸಲು ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ, ದರೋಡೆಕೋರರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ.

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದರೋಡೆ ಪ್ರಕರಣಗಳು ಮುಂದುವರೆದಿದ್ದು, ಹೆದ್ದಾರಿಯಲ್ಲಿ ತೆರಳಲು ಜನರು ಭಯಪಡುವಂತಾಗಿದೆ. ದುಷ್ಕರ್ಮಿಗಳು ಭಾನುವಾರ ಸಂಜೆ ಮದ್ದೂರು ಬಳಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ಅಡ್ಡಗಟ್ಟಿ 26 ಲಕ್ಷ ರೂ.ಗಳನ್ನು ದೋಚಿ ಪರಾರಿಯಾಗಿದ್ದಾರೆ.

ಮೈಸೂರು ಮೂಲದ ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು, ಸಂಜೆ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ಸಂಗ್ರಹಿಸಿದ ಹಣವನ್ನು ತಲುಪಿಸಲು ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ, ದರೋಡೆಕೋರರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ.

ಟೊಯೋಟಾ ಇನ್ನೋವಾದಲ್ಲಿ ಅವರನ್ನು ಹಿಂಬಾಲಿಸುತ್ತಿದ್ದ ಆರೋಪಿಗಳು, ಮದ್ದೂರಿನ ಹೊರವಲಯದಲ್ಲಿರುವ ಐಶ್ವರ್ಯಾ ಕಾನ್ವೆಂಟ್ ಬಳಿ ಗೋವಿಂದರಾಜು ಅವರ ಹುಂಡೈ ಐ20 ಕಾರನ್ನು ಅಡ್ಡಗಟ್ಟಿ ಕಾರಿನ ಕಿಟಕಿ ಒಡೆದು, ಮಾರಕಾಸ್ತ್ರಗಳಿಂದ ಗೋವಿಂದರಾಜು ಅವರನ್ನು ಬೆದರಿಸಿ, 26 ಲಕ್ಷ ರೂ.ಗಳನ್ನು ದೋಚಿ ಪರಾರಿಯಾಗಿದ್ದಾರೆ.

ದರೋಡೆ ನಡೆದ ತಕ್ಷಣ ಗೋವಿಂದರಾಜು ಮದ್ದೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವೃತ್ತ ನಿರೀಕ್ಷಕ ಎಚ್.ಎಸ್. ನವೀನ್ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದೆ.

ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಅವರ ನಿರ್ದೇಶನದ ಮೇರೆಗೆ, ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಶಕದ ಬಳಿಕ ಕೇರಳದಲ್ಲಿ ಕಾಂಗ್ರೆಸ್ ಅಧಿಕಾರ: ದೇವರ ಹೆಸರಿನಲ್ಲಿ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಪ್ರಮಾಣವಚನ ಸ್ವೀಕಾರ..!

'Lack Of Knowledge': ಪತ್ರಿಕಾ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಡಚ್ ಪ್ರಧಾನಿ ಹೇಳಿಕೆ ತಿರಸ್ಕರಿಸಿದ ಭಾರತ!

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಅಧಿಕಾರ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಟೆಂಪಲ್ ರನ್: CM ಗಾದಿ ಕನಸು ಜೀವಂತ..!

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂ.ಗೆ ಭೋಜನ ವ್ಯವಸ್ಥೆ..!

SCROLL FOR NEXT