ಕರ್ನಾಟಕ ಲೋಕಾಯುಕ್ತ 
ರಾಜ್ಯ

ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!

ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಇಂದು ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. 600 ಮನೆಗಳ ನಿರ್ಮಾಣಕ್ಕೆಂದು 33 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು.

ಬೆಳಗಾವಿ: ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಇಂದು ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. 600 ಮನೆಗಳ ನಿರ್ಮಾಣಕ್ಕೆಂದು 33 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು. ಮನೆಗಳನ್ನು ನಿರ್ಮಿಸದೇ ಅನುದಾನದಲ್ಲಿ 23 ಕೋಟಿ ರೂಪಾಯಿ ಗುಳುಂ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ದೂರಿನ ಅನ್ವಯ ಬೆಳಗಾವಿ ಲೋಕಾಯುಕ್ತ ಎಸ್ಪಿ ಪ್ರಶನ್ ದೇಸಾಯಿ ನೇತೃತ್ವದಲ್ಲಿ ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗಳಿಗೆ ಸೇರಿದ 8 ಕಡೆಗಳಲ್ಲಿ ದಾಳಿ ಮಾಡಿದ್ದರು.

ದಾಳಿ ವೇಳೆ ಕೋಟ್ಯಂತರ ರೂ. ಮೌಲ್ಯದ ಬಿಲ್​​​ಗಳು ಸೇರಿ ಮಹತ್ವದ ದಾಖಲೆಗಳನ್ನ ಜಪ್ತಿ ಮಾಡಿದ್ದಾರೆ. ಕೊಳಚೆ ನಿರ್ಮೂಲನಾ ಅಭಿವೃದ್ಧಿ ಇಲಾಖೆ ನಿವೃತ್ತ ಎಇಇ ಶಂಭುಲಿಂಗಪ್ಪ, ಎಕ್ಸಿಕ್ಯೂಟಿವ್ ಇಂಜಿನಿಯರ್ ಲಮಾಣಿ, NTCC ಮ್ಯಾನೇಜರ್ ಎನ್.ಪ್ರಸಾದ್, ವಿಜಯಪುರ ಗುತ್ತಿಗೆದಾರ ಗಿರಮಲಪ್ಪ ಜೋಗೂರ ವಿರುದ್ಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ