ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು Road Rage Case: BMTC ಚಾಲಕನ ಮೇಲೆ ರಾಡ್‌ನಿಂದ ಹಲ್ಲೆ; ಓರ್ವ ಆರೋಪಿ ಬಂಧನ

ಮೇ 12ರಂದು ಬನಶಂಕರಿಯಿಂದ ಬನ್ನೇರುಘಟ್ಟ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ (BMTC) ಬಸ್‌ನ್ನು ಗೊಟ್ಟಿಗೆರೆ ಬಳಿ ಸ್ಕೂಟರ್‌ನಲ್ಲಿ ಬಂದ ಮೂವರು ಯುವಕರು ಅಡ್ಡಗಟ್ಟಿದ್ದರು.

ಬೆಂಗಳೂರು: ನಗರದ ಗೊಟ್ಟಿಗೆರೆ ಸಮೀಪ ನಡೆದ ರೋಡ್ ರೇಜ್ ಪ್ರಕರಣದಲ್ಲಿ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಓರ್ವ ಆರೋಪಿಯನ್ನು ಹುಳಿಮಾವು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಮೇ 12ರಂದು ಬನಶಂಕರಿಯಿಂದ ಬನ್ನೇರುಘಟ್ಟ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ (BMTC) ಬಸ್‌ನ್ನು ಗೊಟ್ಟಿಗೆರೆ ಬಳಿ ಸ್ಕೂಟರ್‌ನಲ್ಲಿ ಬಂದ ಮೂವರು ಯುವಕರು ಅಡ್ಡಗಟ್ಟಿದ್ದರು. ಓವರ್‌ಟೇಕ್ ವಿಚಾರಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ಯುವಕರ ನಡುವೆ ವಾಗ್ವಾದ ಶುರುವಾಗಿತ್ತು.

ಪೊಲೀಸರ ಮಾಹಿತಿ ಪ್ರಕಾರ, ವಾಗ್ವಾದ ತೀವ್ರಗೊಂಡ ನಂತರ ಆರೋಪಿಗಳು ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಕಬ್ಬಿಣದ ರಾಡ್ ಹಾಗೂ ಇತರ ಉಪಕರಣಗಳಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದರು. ಈ ಘಟನೆ ರಸ್ತೆ ಮಧ್ಯೆಯೇ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಅಬ್ದುಲ್ ಶೋಯಬ್ (26) ಎಂದು ಗುರುತಿಸಲಾಗಿದ್ದು, ಈತ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ವೀಡಿಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಘಟನೆಯ ಗಂಭೀರತೆಯನ್ನು ಗಮನಿಸಿ ಹುಳಿಮಾವು ಪೊಲೀಸರು ಸ್ವಯಂಪ್ರೇರಿತವಾಗಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದರು.

ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೇ 17ರಂದು ಬಿಲ್ವಾರದಹಳ್ಳಿಯ ಟಿಪ್ಪು ವೃತ್ತದ ಬಳಿ ಅಬ್ದುಲ್ ಶೋಯಬ್‌ನನ್ನು ಬಂಧಿಸಿದ್ದಾರೆ.

ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!