ಸಾಂದರ್ಭಿಕ ಚಿತ್ರ 
ರಾಜ್ಯ

ಹೋಟೆಲ್ ರೂಮ್‌ನಲ್ಲಿ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ ಪತ್ತೆ; ಅಮೆರಿಕಾ ಮೂಲದ NRI ಬಂಧನ

ಹೋಟೆಲ್‌ನಿಂದ ಹೊರಟ ನಂತರ ಆರೋಪಿ ಹೋಟೆಲ್ ಸಿಬ್ಬಂದಿಗೆ ಕರೆ ಮಾಡಿ, ತಾನು ತಂಗಿದ್ದ ಕೊಠಡಿಯಲ್ಲಿ 7 ಜೀವಂತ ಗುಂಡುಗಳಿರುವ ಮ್ಯಾಗಜೀನ್ ಅನ್ನು ಮರೆತು ಬಿಟ್ಟಿರುವುದಾಗಿ ತಿಳಿಸಿದ್ದನು.

ಬೆಂಗಳೂರು: ಸೂಕ್ತ ಪರವಾನಗಿ ಇಲ್ಲದೆ ಅಕ್ರಮವಾಗಿ ಏಳು ಜೀವಂತ ಗುಂಡುಗಳನ್ನು (Live Bullets) ಹೊಂದಿದ್ದ ಆರೋಪದ ಮೇಲೆ ಅಮೆರಿಕ ಮೂಲದ ಅನಿವಾಸಿ ಭಾರತೀಯನೊಬ್ಬನನ್ನು ಬೆಂಗಳೂರಿನ ಜೆ.ಸಿ. ನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಅಮೆರಿಕದ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಅರ್ಮಾನ್ ಮುತಾಹರ್ (34) ಎಂದು ಗುರುತಿಸಲಾಗಿದೆ.

ಆರೋಪಿ ಅರ್ಮಾನ್ ಏಪ್ರಿಲ್ 27 ರಂದು ಬೆಂಗಳೂರಿನ ಜಯಮಹಲ್ ಪ್ಯಾಲೇಸ್ ಹೋಟೆಲ್‌ನಲ್ಲಿ ಕೊಠಡಿ ಪಡೆದಿದ್ದನು. ಏಪ್ರಿಲ್ 28 ರಂದು ಆತ ಕೊಠಡಿಯನ್ನು ಖಾಲಿ ಮಾಡಿ ತೆರಳಿದ್ದನು.

ಹೋಟೆಲ್‌ನಿಂದ ಹೊರಟ ನಂತರ ಆರೋಪಿ ಹೋಟೆಲ್ ಸಿಬ್ಬಂದಿಗೆ ಕರೆ ಮಾಡಿ, ತಾನು ತಂಗಿದ್ದ ಕೊಠಡಿಯಲ್ಲಿ 7 ಜೀವಂತ ಗುಂಡುಗಳಿರುವ 'ರೂಗರ್' (Ruger) ಕಂಪನಿಯ ಮ್ಯಾಗಜೀನ್ ಅನ್ನು ಮರೆತು ಬಿಟ್ಟಿರುವುದಾಗಿ ತಿಳಿಸಿದ್ದನು.

ಅದನ್ನು ಸುರಕ್ಷಿತವಾಗಿ ಇಡುವಂತೆ ಹಾಗೂ ಒಂದು ಗಂಟೆಯಲ್ಲಿ ಬಂದು ಪಡೆದುಕೊಳ್ಳುವುದಾಗಿ ಹೇಳಿದ್ದನು. ಹೋಟೆಲ್ ಆಡಳಿತ ಮಂಡಳಿ ಆತನನ್ನು ಮರಳಿ ಸಂಪರ್ಕಿಸಲು ಯತ್ನಿಸಿದರೂ ಆತ ಬಾರದಿದ್ದಾಗ, ಅನುಮಾನಗೊಂಡ ಹೋಟೆಲ್ ಮ್ಯಾನೇಜರ್ ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ.

ಹೋಟೆಲ್ ಮ್ಯಾನೇಜರ್ ನೀಡಿದ ದೂರಿನನ್ವಯ ಜೆ.ಸಿ. ನಗರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ (Arms Act) ಪ್ರಕರಣ ದಾಖಲಿಸಿದ್ದಾರೆ.

ವಿಚಾರಣೆಗಾಗಿ ನ್ಯಾಯಾಲಯವು ಆರೋಪಿಯನ್ನು ಮೇ 7 ರಿಂದ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ತನಿಖೆಯ ಭಾಗವಾಗಿ ಆತನ ಪಾಸ್‌ಪೋರ್ಟ್, ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ವಿಚಾರಣೆ ವೇಳೆ ಆರೋಪಿ, ಆರ್.ಟಿ. ನಗರದಲ್ಲಿರುವ ತನ್ನ ಸಹೋದರಿಯನ್ನು ಭೇಟಿ ಮಾಡಲು ಭಾರತಕ್ಕೆ ಬರುವಾಗ ಆಕಸ್ಮಿಕವಾಗಿ ಲಗೇಜ್‌ನಲ್ಲಿ ಈ ಮ್ಯಾಗಜೀನ್ ಬಂದಿರುವುದಾಗಿ ಹೇಳಿದ್ದಾನೆಂದು ತಿಳಿದುಬಂದಿದೆ.

ವ್ಯಕ್ತಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ತಿಳಿದುಬಂದಿದೆ. ಆದರೆ, ಯಾವುದೇ ಪರವಾನಗಿ ಇಲ್ಲದೆ, ಮೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಅತ್ಯಂತ ಕಟ್ಟುನಿಟ್ಟಿನ ಭದ್ರತಾ ತಪಾಸಣೆಗಳನ್ನು ದಾಟಿ ಈತ ಬೆಂಗಳೂರಿಗೆ ಜೀವಂತ ಗುಂಡುಗಳನ್ನು ತಂದಿದ್ದು ಹೇಗೆ ಎಂಬುದು ಈಗ ಭದ್ರತಾ ಸಂಸ್ಥೆಗಳಿಗೆ ದೊಡ್ಡ ಪ್ರಶ್ನೆಯಾಗಿದೆ. ಈ ಗಂಭೀರ ಭದ್ರತಾ ಲೋಪದ ಕುರಿತು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ರೈತರು, KRS ತೀವ್ರ ವಿರೋಧ!

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

ಇಟಲಿಯಲ್ಲಿ ಪ್ರಧಾನಿ ಮೋದಿ: “ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್” ಎಂದು ಆತ್ಮೀಯ ಸ್ವಾಗತ ಕೋರಿದ ಜಾರ್ಜಿಯಾ ಮೆಲೋನಿ..!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಮಹಾಘಾತಕ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ..!

SCROLL FOR NEXT