ಪ್ರಧಾನಿ ನರೇಂದ್ರ ಮೋದಿ ಮತ್ತು ನಟ ಕಿಶೋರ್ ಕುಮಾರ್  
ರಾಜ್ಯ

ಸಾರ್ವಜನಿಕರು ಶೇ.25ರಷ್ಟು ಉಸಿರಾಟ ಕಡಿಮೆ ಮಾಡಿ ದೇಶಭಕ್ತಿ ಪ್ರದರ್ಶಿಸಬೇಕು: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ವ್ಯಂಗ್ಯ

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಕಿಶೋರ್ ಕುಮಾರ್, ಮುಂದಿನ ಪ್ರಕಟಣೆಯಲ್ಲಿ ಈ ನಾನ್-ಬಯಲಾಜಿಕಲ್ ಸರ್ಕಾರವು ಹಸ್ದೇವ್ ನಿಂದ ನಿಕೋಬಾರ್ ವರೆಗೆ ನಮ್ಮ ಕಾಡುಗಳನ್ನು ಮಿಸ್ಟರ್ ಎ ಗೆ ಮಾರಾಟ ಮಾಡುವಲ್ಲಿ ನಿರತವಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ಚಿನ್ನ ಖರೀದಿಸಬೇಡಿ, ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಇತರ ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಮಿತಿಗೊಳಿಸಿ, ವಿದೇಶ ಪ್ರವಾಸ ಕಡಿಮೆ ಮಾಡಿ, ವರ್ಕ್ ಫ್ರಂ ಹೋಮ್ ರೂಢಿಸಿಕೊಳ್ಳಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಅಣಕಿಸಿ ನಟ ಕಿಶೋರ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಂದಿನ ಪ್ರಕಟಣೆಯಲ್ಲಿ ಈ ನಾನ್-ಬಯಲಾಜಿಕಲ್ ಸರ್ಕಾರವು ಹಸ್ದೇವ್ ನಿಂದ ನಿಕೋಬಾರ್ ವರೆಗೆ ನಮ್ಮ ಕಾಡುಗಳನ್ನು ಮಿಸ್ಟರ್ ಎ ಗೆ ಮಾರಾಟ ಮಾಡುವಲ್ಲಿ ನಿರತವಾಗಿದ್ದು, ಭಾರತವನ್ನು ವಿಶ್ವದ ಅತ್ಯಂತ ಕಲುಷಿತ ದೇಶವನ್ನಾಗಿ ಮಾಡಿ, ಮಾಲಿನ್ಯವನ್ನು ನಿಭಾಯಿಸಲು ಅಸಮರ್ಥವಾಗಿರುವುದರಿಂದ ಸಾರ್ವಜನಿಕರು 25% ರಷ್ಟು ಉಸಿರಾಟವನ್ನು ಕಡಿಮೆ ಮಾಡಿ ದೇಶಭಕ್ತಿಯನ್ನು ಪ್ರದರ್ಶಿಸಬೇಕು ಎಂದು ಹೇಳಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಕಿಶೋರ್ ಕುಮಾರ್ ಮಾಡಿರುವ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ