ಬೆಂಗಳೂರು: ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿಯನ್ನು ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಿಗ್ಗೆ 11.30 ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ರಾಮಮೂರ್ತಿನಗರದ ಎನ್‌ಆರ್‌ಐ ಲೇಔಟ್ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್ ಕಟ್ಟಡದ ಐದನೇ ಮಹಡಿಯಿಂದ ಜಿಗಿಯಲು ಬಾಲಕಿ ಯತ್ನಿಸಿದ್ದಾಳೆ. ಆಕೆಯ ಪೋಷಕರ ಜೊತೆಗಿನ ಜಗಳದಿಂದಾಗಿ ಈ ರೀತಿ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಆತ್ಮಹತ್ಯೆ ಯತ್ನೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಕಿರುಚಾಡುತ್ತಾ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಾಲಕಿ ಹೇಳಿದ ನಂತರ ಪ್ರದೇಶದಲ್ಲಿ ಆತಂಕ ಆವರಿಸಿತ್ತು. ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಆಕೆಯನ್ನು ನೋಡಿದ ನಂತರ ನಿವಾಸಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು.
ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯದಿಂದ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆಕೆಯನ್ನು ಕೌನ್ಸೆಲಿಂಗ್‌ಗಾಗಿ ನಿಮ್ಹಾನ್ಸ್‌ಗೆ ಕಳುಹಿಸಿಲಾಗಿದೆ.ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.