ವೈದ್ಯರ ಮೇಲಿನ ಹಲ್ಲೆ ಖಂಡಿಸಿ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ 
ರಾಜ್ಯ

BRIMS ವೈದ್ಯರಿಗೆ ಹಿಗ್ಗಾಮುಗ್ಗ ಥಳಿಸಿದ ಗುಂಪು; ಘಟನೆ ಖಂಡಿಸಿ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ; Video

ಭಾಲ್ಕೆ ಅವರನ್ನು ರಕ್ಷಿಸಲು ಬಂದ ಇತರ ಸಿಬ್ಬಂದಿ, ಆ ಗ್ಯಾಂಗ್ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಅವರು ವೈದ್ಯರ ಮೇಲೆ ಹಲ್ಲೆಯನ್ನು ಮುಂದುವರಿಸಿದ್ದಾರೆ ಎನ್ನಲಾಗಿದೆ.

ಬೀದರ್: ಗುರುವಾರ ತಡರಾತ್ರಿ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬ್ರಿಮ್ಸ್) ವೈದ್ಯರೊಬ್ಬರ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಹಿಂಸಾತ್ಮಕ ಘಟನೆಗಳಿಂದ ರಕ್ಷಣೆ ನೀಡುವಂತೆ ಒತ್ತಾಯಿಸಿ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.

ಪೊಲೀಸರ ಪ್ರಕಾರ, ತುಕಾರಾಂ ಭಾಲ್ಕೆ ಎನ್ನುವ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾಗ, ಕೆಲವು ಯುವಕರು ವಿಜಯ್ ಸಿಂಗ್ ಎಂಬ ರೋಗಿಯೊಂದಿಗೆ ಸ್ಥಳಕ್ಕೆ ಬಂದಿದ್ದಾರೆ. ಅವರಿಗೆ ಗಂಭೀರ (ಮಾರಣಾಂತಿಕ) ಗಾಯಗಳಾಗಿದ್ದು, ಚಿಕಿತ್ಸೆಯ ಅಗತ್ಯವಿತ್ತು.

ವೈದ್ಯರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆಯೇ ಚಿಕಿತ್ಸೆ ನೀಡಬೇಕೆಂದು ಗುಂಪು ಒತ್ತಾಯಿಸಿದೆ.

ವೈದ್ಯಕೀಯ-ಕಾನೂನು ಪ್ರಕರಣ (MLC) ಆಗಿರುವುದರಿಂದ ಆಸ್ಪತ್ರೆಯ OPD ರಿಜಿಸ್ಟರ್‌ನಲ್ಲಿ ರೋಗಿಯ ಹೆಸರನ್ನು ದಾಖಲಿಸಬೇಕೆಂದು ವೈದ್ಯರು ಒತ್ತಾಯಿಸಿದ್ದಾರೆ. ಆಗ 10ಕ್ಕಿಂತ ಹೆಚ್ಚಿನ ಸಂಖ್ಯೆಯ ಯುವಕರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ.

ಭಾಲ್ಕೆ ಅವರನ್ನು ರಕ್ಷಿಸಲು ಬಂದ ಇತರ ಸಿಬ್ಬಂದಿ, ಆ ಗ್ಯಾಂಗ್ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಅವರು ವೈದ್ಯರ ಮೇಲೆ ಹಲ್ಲೆಯನ್ನು ಮುಂದುವರಿಸಿದ್ದಾರೆ ಎನ್ನಲಾಗಿದೆ.

ಘಟನೆ ನಂತರ, ಕೋಪಗೊಂಡ ವೈದ್ಯಕೀಯ ಸಿಬ್ಬಂದಿ ಘಟನೆಯನ್ನು ಖಂಡಿಸಿ ಮತ್ತು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಮುಷ್ಕರ ನಡೆಸಿದರು.

ಭಾಲ್ಕೆ ಬೀದರ್‌ನ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ