ರಾಜ್ಯ

Cockroach Janta Party Karnataka: ಬೆಂಗಳೂರಿನಲ್ಲಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

ಈ ಪೋಸ್ಟ್ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸರು, ಟೌನ್ ಹಾಲ್ ಬಳಿ ಕಾರ್ಯಕ್ರಮ ಆಯೋಜನೆಗೆ ಯಾವುದೇ ವ್ಯಕ್ತಿ, ಸಂಘಟನೆ, ಪಕ್ಷದಿಂದ ಅನುಮತಿ ಕೋರಿರುವ ಯಾವುದೇ ಅರ್ಜಿಯನ್ನು ಸ್ವೀಕರಿಸಿಲ್ಲ. ಈ ಸಂಬಂಧ ಯಾವುದೇ ಅಧಿಕೃತ ಅನುಮತಿ ನೀಡಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಬೆಂಗಳೂರು: ದೇಶಾದ್ಯಂತ ಕಾಕ್ರೋಜ್ ಜನತಾ ಪಾರ್ಟಿ ಸದ್ದು ಮಾಡುತ್ತಿರುವಂತೆಯೇ ಕಾಕ್ರೋಜ್ ಕರ್ನಾಟಕ ಪಾರ್ಟಿ ಕರ್ನಾಟಕದಿಂದ ಇದೇ 24 ರಂದು ಬೆಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ಶಾಂತಿಯುತ ಮಾನವ ಸರಪಳಿ ನಿರ್ಮಾಣ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹರಿದಾಡುತ್ತಿದೆ.

ಯುವಕರಿಗೆ ಭವಿಷ್ಯವಿಲ್ಲ. ಬೆಲೆ ಏರಿಕೆಯಿಂದ ಬದುಕಿಲ್ಲ. ವಿದ್ಯಾರ್ಥಿಗಳಿಗೆ ನೀಟು ಪರೀಕ್ಷೆಇಲ್ಲ. ನಮ್ಮ ಮತ ಕದಿಯುತ್ತದ್ದಾರೆ. ಬನ್ನಿ ಕಾಕ್ರೋಜ್ ಗಳ ಸಂದೇಶ ನೀಡೋಣ. ಇಲ್ಲಿ ನಾಯಕರಿಲ್ಲ. ನಮಗೆ ನಾವೇ ನಾಯಕರು. ಇಲ್ಲಿ ಸಂಘಟನೆ ಇಲ್ಲ. ಪ್ರಜೆಗಳು ಕೈ ಜೋಡಿಸುವುದೇ ಸಂಘಟನೆ . ಬನ್ನಿ ಶಕ್ತಿ ಪ್ರದರ್ಶಿಸೋಣ. ಆತ್ಮ ವಂಚಕ ಆಡಳಿತಕ್ಕೆ ಸಂದೇಶ ರವಾನಿಸೋಣ ಎಂದು ಕರೆ ನೀಡಲಾಗಿತ್ತು.

ಈ ಪೋಸ್ಟ್ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸರು, ಟೌನ್ ಹಾಲ್ ಬಳಿ ಕಾರ್ಯಕ್ರಮ ಆಯೋಜನೆಗೆ ಯಾವುದೇ ವ್ಯಕ್ತಿ, ಸಂಘಟನೆ, ಪಕ್ಷದಿಂದ ಅನುಮತಿ ಕೋರಿರುವ ಯಾವುದೇ ಅರ್ಜಿಯನ್ನು ಸ್ವೀಕರಿಸಿಲ್ಲ. ಈ ಸಂಬಂಧ ಯಾವುದೇ ಅಧಿಕೃತ ಅನುಮತಿ ನೀಡಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಫ್ರೀಡಂ ಪಾರ್ಕ್ ಹೊರತುಪಡಿಸಿ, ಬೇರೆ ಯಾವುದೇ ಸ್ಥಳಗಳಲ್ಲಿ ಧರಣಿ, ಪ್ರತಿಭಟನಾ Rally ನಡೆಸಲು ಅವಕಾಶ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಇದನ್ನು ಉಲ್ಲಂಘಿಸಿ ಟೌನ್ ಹಾಲ್ ಮುಂಭಾಗ ಜನರು ಬಂದು ಸೇರುವುದು ನ್ಯಾಯಾಲಯ ಆದೇಶದ ಸ್ಪಷ್ಪ ಉಲ್ಲಂಘನೆಯಾಗಿರುತ್ತದೆ. ಹೀಗಾಗಿ ಜನರು ಟೌನ್ ಹಾಲ್ ಬಳಿ ಆಗಮಿಸಿ ಗುಂಪು ಸೇರದಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel