ಅರಣ್ಯ 
ರಾಜ್ಯ

ಅರಣ್ಯ ಉಳಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ: CAMPA ನಿಧಿ ಪರಿಣಾಮಕಾರಿಯಾಗಿ ಬಳಸುವಂತೆ ಅಧಿಕಾರಿಗಳಿಗೆ ಸೂಚನೆ..!

ಅರಣ್ಯ ಪ್ರದೇಶಗಳ ಗಡಿಭಾಗಗಳಲ್ಲಿ ಬೇಲಿ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು. ವಿಶೇಷವಾಗಿ ನಗರ ಮತ್ತು ಪಟ್ಟಣಗಳಿಗೆ ಹೊಂದಿಕೊಂಡಿರುವ ಅರಣ್ಯ ಪ್ರದೇಶಗಳಲ್ಲಿ ಅತಿಕ್ರಮಣದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭೂಮಿ ರಕ್ಷಣೆಗೆ ಆದ್ಯತೆ ನೀಡಬೇಕು.

ಬೆಂಗಳೂರು: ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯ ಭೂಮಿಗಳ ರಕ್ಷಣೆ ಹಾಗೂ ಅರಣ್ಯ ಗಡಿಭಾಗಗಳನ್ನು ಭದ್ರಪಡಿಸುವ ಕುರಿತು ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಭೂಮಿಯನ್ನು ಅತಿಕ್ರಮಣದಿಂದ ಮುಕ್ತಗೊಳಿಸಿ, ಮತ್ತೆ ಇಲಾಖೆಯ ವಶಕ್ಕೆ ಪಡೆಯಬೇಕು ಎಂದು ಆದೇಶಿಸಿದರು.

ಅರಣ್ಯ ಪ್ರದೇಶಗಳ ಗಡಿಭಾಗಗಳಲ್ಲಿ ಬೇಲಿ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು. ವಿಶೇಷವಾಗಿ ನಗರ ಮತ್ತು ಪಟ್ಟಣಗಳಿಗೆ ಹೊಂದಿಕೊಂಡಿರುವ ಅರಣ್ಯ ಪ್ರದೇಶಗಳಲ್ಲಿ ಅತಿಕ್ರಮಣದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭೂಮಿ ರಕ್ಷಣೆಗೆ ಆದ್ಯತೆ ನೀಡಬೇಕು. ಅರಣ್ಯ ಭೂಮಿಗಳನ್ನು ಮರುಸ್ವಾಧೀನಪಡಿಸಿಕೊಳ್ಳಲು CAMPA ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ ಹಾನಿಗೊಳಗಾಗುವ ಜನರಿಗೆ ಸೂಕ್ತ ಪರಿಹಾರ ನೀಡುವ ಕ್ರಮ ಕೈಗೊಳ್ಳಬೇಕು. ಕಾನೂನುಬದ್ಧವಾಗಿ ಅರಣ್ಯ ಭೂಮಿಯನ್ನು ರಕ್ಷಿಸುವುದರ ಜೊತೆಗೆ ಜನರ ಹಿತಾಸಕ್ತಿಯನ್ನೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಹಾಸನ ಸಮೀಪದ ಮಡೆನೂರು ಅರಣ್ಯ ಪ್ರದೇಶದ ವಿಷಯವನ್ನೂ ಸಚಿವರು ಪ್ರಸ್ತಾಪಿಸಿದರು. ಅರಣ್ಯ ಇಲಾಖೆ ವಶದಲ್ಲಿದ್ದರೂ ಅಲ್ಲಿ ಅರಣ್ಯೀಕರಣ ಕಾರ್ಯ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಖಾಲಿ ಇರುವ ಅರಣ್ಯ ಭೂಮಿಯಲ್ಲಿ ತಕ್ಷಣ ಸಸಿ ನೆಡುವುದು ಮತ್ತು ಅರಣ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆರಂಭಿಸಬೇಕು ಎಂದು ಸೂಚಿಸಿದರು.

ಇದೇ ವೇಳೆ ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ‘ಚಿರತೆ ಕಾರ್ಯಪಡೆ’ ರಚಿಸಲು ಸಚಿವರು ಆದೇಶಿಸಿದರು.

ಹಲವು ಗ್ರಾಮಗಳಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಚಿರತೆಗಳನ್ನು ಸೆರೆಹಿಡಿದು ಸುರಕ್ಷಿತ ಅರಣ್ಯ ಪ್ರದೇಶಗಳಿಗೆ ಸ್ಥಳಾಂತರಿಸಲು ವಿಶೇಷ ತಂಡ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ತೀವ್ರವಾಗುತ್ತಿರುವುದರಿಂದ ಜನರ ಸುರಕ್ಷತೆ ಮತ್ತು ವನ್ಯಜೀವಿ ಸಂರಕ್ಷಣೆಯನ್ನು ಸಮತೋಲನದಲ್ಲಿ ಕಾಪಾಡುವ ಅಗತ್ಯವಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್