ಸಿಎನ್ ಜಿ (ಸಾಂಕೇತಿಕ ಚಿತ್ರ) online desk
ರಾಜ್ಯ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನೆಲ್ಲೇ ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಹೆಚ್ಚಳ: ವಾಹನ ಸವಾರರು ಕಂಗಾಲು

ಇಂದು ಬೆಂಗಳೂರಿನಲ್ಲಿ CNG ದರ 2 ರೂಪಾಯಿ ಏರಿಕೆಯಾಗಿದ್ದು, ಕೆಜಿ ಸಿಎನ್​​ಜಿ 93 ರೂಪಾಯಿಯಿಂದ 95 ರೂಪಾಯಿಗೆ ಹೆಚ್ಚಳವಾಗಿದೆ.

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಶನಿವಾರ ಸಿಎನ್​​ಜಿ ಬೆಲೆಯೂ ಏರಿಕೆಯಾಗಿದ್ದು, ವಾಹನ ಸವಾರರು ಕಂಗಾಲಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿ CNG ದರ 2 ರೂಪಾಯಿ ಏರಿಕೆಯಾಗಿದ್ದು, ಕೆಜಿ ಸಿಎನ್​​ಜಿ 93 ರೂಪಾಯಿಯಿಂದ 95 ರೂಪಾಯಿಗೆ ಹೆಚ್ಚಳವಾಗಿದೆ. ಇದು ಕಳೆದ 9 ದಿನದಲ್ಲಿ ಮೂರನೇ ಬಾರಿ ಸಿಎನ್‌ಜಿ ಬೆಲೆ ಏರಿಕೆಯಾಗಿದೆ.

ಶಾಂತಿನಗರದ ಗೇಲ್ ಗ್ಯಾಸ್ ಮುಂಭಾಗದಲ್ಲಿ ಸಿಎನ್‌ಜಿಗಾಗಿ ಚಾಲಕರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಗಂಟೆಗಳ ಕಾಲ ಕಾದರೂ ಇಂಧನ ಸಿಗುವ ಯಾವುದೇ ಖಾತರಿಯಿಲ್ಲ. ಇದು ದೈನಂದಿನ ಕೆಲಸ ಕಾರ್ಯಗಳಿಗೆ ಅಡ್ಡಿಯಾಗುತ್ತಿದ್ದು, ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ ಎಂದು ಚಾಲಕರು ಅಳಲು ತೋಡಿಕೊಂಡಿದ್ದಾರೆ.

ನಿರಂತರ ಬೆಲೆ ಏರಿಕೆ ಮತ್ತು ಇಂಧನ ಪೂರೈಕೆ ಸಮಸ್ಯೆಯಿಂದ ಬೆಂಗಳೂರಿನಲ್ಲಿ ಜೀವನ ನಡೆಸುವುದು ದುಸ್ತರವಾಗಿದೆ ಆಟೋ ಚಾಲಕರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel