ಸಂಗ್ರಹ ಚಿತ್ರ 
ರಾಜ್ಯ

ಕೋರ್ಟ್ ಹಾಲ್'ನಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ: ವಿಚಾರಣೆಗೆ ಅಡ್ಡಿಪಡಿಸಿದ ಆರೋಪ, ಪ್ರಕರಣ ದಾಖಲು..!

32 ವರ್ಷದ ಅಮ್ರೀನ್ ಎಂಬ ಮಹಿಳೆ ರಾಮನಗರ ಪಟ್ಟಣದ ಟಿಪ್ಪು ಸರ್ಕಲ್ ಸಮೀಪದ ನಿವಾಸಿಯಾಗಿದ್ದಾರೆ. ಇವರು ತಮ್ಮ ಪತಿ ಅಲೀಮ್ ಪಾಷಾ ಹಾಗೂ ಇತರರ ವಿರುದ್ಧ ವರದಕ್ಷಿಣೆ ಕಿರುಕುಳದ ಪ್ರಕರಣ ದಾಖಲಿಸಿದ್ದರು.

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ಮಹಿಳೆಯೊಬ್ಬರು ನ್ಯಾಯಾಲಯದ ಒಳಗೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರ ನ್ಯಾಯಾಲಯದಲ್ಲಿ ನಡೆದಿದ್ದು, ಈ ಘಟನೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತ್ತು.

ಅಸ್ವಸ್ಥಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

32 ವರ್ಷದ ಅಮ್ರೀನ್ ಎಂಬ ಮಹಿಳೆ ರಾಮನಗರ ಪಟ್ಟಣದ ಟಿಪ್ಪು ಸರ್ಕಲ್ ಸಮೀಪದ ನಿವಾಸಿಯಾಗಿದ್ದಾರೆ. ಇವರು ತಮ್ಮ ಪತಿ ಅಲೀಮ್ ಪಾಷಾ ಹಾಗೂ ಇತರರ ವಿರುದ್ಧ ವರದಕ್ಷಿಣೆ ಕಿರುಕುಳದ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಅಮ್ರೀನ್ ನ್ಯಾಯಾಲಯದಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಘಟನೆಯ ಸಮಯದಲ್ಲಿ ನ್ಯಾಯಾಧೀಶರು, ನ್ಯಾಯಾಲಯ ಸಿಬ್ಬಂದಿ, ಪೊಲೀಸರು, ಅಮ್ರೀನ್ ಅವರ ತಂದೆ ಮುನವರ್ ಪಾಷಾ ಹಾಗೂ ಇತರರು ನ್ಯಾಯಾಲಯದಲ್ಲಿದ್ದರು.

ವಿಚಾರಣೆ ವೇಳೆ ಮಹಿಳೆ ಕುರ್ಚಿಯಿಂದ ಏಕಾಏಕಿ ಕುಸಿದು ಬಿದ್ದಿದ್ದಾರೆ. ಬಳಿಕ ಸಿಬ್ಬಂದಿ ಮತ್ತು ಪೊಲೀಸರು ಅವರನ್ನು ರಾಮನಗರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸಂಬಂಧ ನ್ಯಾಯಾಲಯದ ಹಿರಿಯ ಶೆರಿಸ್ತೇದಾರ್ ಶ್ರೀನಿವಾಸ್ ನೀಡಿದ ದೂರಿನ ಆಧಾರದಲ್ಲಿ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಅಮ್ರೀನ್ ವಿರುದ್ಧ ಪ್ರಕರಣ ದಾಖಲಾಗಿದೆ.

ನ್ಯಾಯಾಲಯದ ಕಾರ್ಯಾಚರಣೆಗೆ ಅಡ್ಡಿಪಡಿಸುವ ಉದ್ದೇಶದಿಂದ ಆತ್ಮಹತ್ಯೆಗೆ ಯತ್ನಿಸಿದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 226 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಅಮ್ರೀನ್ ಇದೀಗ ಪ್ರಾಣಾಪಾಯದಿಂದ ಹೊರಬಂದಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ವಿಚಾರಣಾಧಿಕಾರಿಗಳ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಾರ್ಚ್ 29, 2026ರಂದು ಅಮ್ರೀನ್ ತಮ್ಮ ಪತಿ ಅಲೀಂ ಪಾಷಾ ಹಾಗೂ ಇತರ ಆರು ಮಂದಿ ವಿರುದ್ಧ ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದರು.

ಅಮ್ರೀನ್ ಅವರಿಗೆ ಇದು ಎರಡನೇ ವಿವಾಹವಾಗಿದ್ದು, ಅವರ ಮೊದಲ ಪತಿ ಮೃತಪಟ್ಟಿದ್ದರು. ಅಲೀಂ ಪಾಷಾ ಅವರ ಮೊದಲ ಪತ್ನಿಯೂ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಇದೇ ವೇಳೆ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಲಕ್ಷ್ಮೀ ಪ್ರಿಯ ಎಂಬ 26 ವರ್ಷದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು ಪೊಲೀಸ್ ಕಮಿಷನರೇಟ್‌ನ HAL ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ ರಾಜೇಶ್ ಆರಾಧ್ಯ ಅವರ ಪತ್ನಿಯಾಗಿದ್ದರು.

ಪತಿ ಹಾಗೂ ಅತ್ತೆ-ಮಾವರಿಂದ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆ ಎದುರಿಸುತ್ತಿದ್ದರು ಎಂದು ಲಕ್ಷ್ಮೀ ಪ್ರಿಯಾ ಅವರ ಪೋಷಕರು ಆರೋಪಿಸಿದ್ದಾರೆ.

ಘಟನೆಗೂ ಮೊದಲು ಲಕ್ಷ್ಮೀ ಪ್ರಿಯಾ ತಮ್ಮ ಮೊಬೈಲ್ ಪಾಸ್‌ವರ್ಡ್ ಅನ್ನು ಸಹೋದರಿ ಜಯಶ್ರೀಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದರು ಎನ್ನಲಾಗಿದೆ.

ಸಂದೇಹಗೊಂಡ ಸಹೋದರಿ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಪತಿ ರಾಜೇಶ್ ಅವರನ್ನು ಸಂಪರ್ಕಿಸಿದಾಗ ಆತ್ಮಹತ್ಯೆ ವಿಷಯ ಬೆಳಕಿಗೆ ಬಂದಿದೆ.

ದಂಪತಿಗೆ ಎಂಟು ತಿಂಗಳ ಹೆಣ್ಣು ಮಗು ಇದೆ. ಈ ಸಂಬಂಧ ಕೆಆರ್ ಪುರಂ ಪೊಲೀಸರು ರಾಜೇಶ್ ಹಾಗೂ ಅವರ ಪೋಷಕರ ವಿರುದ್ಧ ವರದಕ್ಷಿಣೆ ಸಾವು ಪ್ರಕರಣ ದಾಖಲಿಸಿದ್ದಾರೆ.

ನೀವು ಅಥವಾ ನಿಮ್ಮ ಪರಿಚಯದ ಯಾರಾದರೂ ಮಾನಸಿಕ ಒತ್ತಡ, ಖಿನ್ನತೆ ಅಥವಾ ಆತ್ಮಹತ್ಯೆ ಚಿಂತನೆಗಳಿಂದ ಬಳಲುತ್ತಿದ್ದರೆ, ದಯವಿಟ್ಟು ಅದನ್ನು ನಿರ್ಲಕ್ಷಿಸಬೇಡಿ. ತಕ್ಷಣ ಕುಟುಂಬದವರು, ಸ್ನೇಹಿತರು ಅಥವಾ ಮಾನಸಿಕ ಆರೋಗ್ಯ ತಜ್ಞರ ನೆರವು ಪಡೆಯಿರಿ. ತುರ್ತು ಸಹಾಯಕ್ಕಾಗಿ 24x7 ಟೆಲಿ-ಮನಸ್ ಸಹಾಯವಾಣಿ 14416 ಅಥವಾ 1-800-891-4416 ಗೆ ಕರೆ ಮಾಡಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಬೋಲಾ ಭೀತಿ: ಡಿಆರ್‌ಸಿ, ಉಗಾಂಡಾ, ದಕ್ಷಿಣ ಸುಡಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ಅಮೆರಿಕ-ಇರಾನ್ ಮಾತುಕತೆಯಲ್ಲಿ ಮಹತ್ವದ ಪ್ರಗತಿ: ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿದೆ ಎಂದ ಡೊನಾಲ್ಟ್ ಟ್ರಂಪ್, ಹಾರ್ಮುಜ್ ಜಲಸಂಧಿ ಪುನರಾರಂಭ ನಿರೀಕ್ಷೆ

ಅಮೆರಿಕ ಶ್ವೇತಭವನ ಬಳಿ ಮತ್ತೆ ಗುಂಡಿನ ದಾಳಿ: ಪ್ರತಿದಾಳಿಗೆ ಬಂದೂಕುಧಾರಿ ಸಾವು-Video

ಮಧ್ಯಪ್ರಾಚ್ಯ ಸಂಘರ್ಷ: ತುರ್ತು ಸಭೆ ಕರೆದ ಡೊನಾಲ್ಡ್ ಟ್ರಂಪ್; ವಾಷಿಂಗ್ಟನ್‌ಗೆ ಜೆಡಿ ವ್ಯಾನ್ಸ್ ದಿಢೀರ್ ವಾಪಸ್ಸು, ಕುತೂಹಲ ಮೂಡಿಸಿದ ಬೆಳವಣಿಗೆ..!

‘ಕಾಕ್‌ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್: “BJPಗೆ ಭಯವೇಕೆ: ಪಿಣರಾಯಿ ವಿಜಯನ್ ಪ್ರಶ್ನೆ

SCROLL FOR NEXT