ಆತ್ಮಹತ್ಯೆಗೆ ಶರಣಾದ ಯುವತಿ 
ರಾಜ್ಯ

ನೀಟ್ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; PUCಯಲ್ಲೇ ಅನುತ್ತೀರ್ಣಳಾಗಿದ್ದ ಭಾಗ್ಯಶ್ರೀ; Marks cardನಲ್ಲಿ ಬಯಲಾಯ್ತು ಆಘಾತಕಾರಿ ಸತ್ಯ..!

ಭಾಗ್ಯಶ್ರೀ (18) ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈಕೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಪರೀಕ್ಷೆ ರದ್ದಾದ ಕಾರಣ ಸಾವಿಗೆ ಶರಣಾಗಿದ್ದಾಳೆಂದು ಕುಟುಂಬಸ್ಥರು ಹೇಳಿದ್ದರು.

ಕಲಬುರಗಿ: ನೀಟ್ ಪರೀಕ್ಷೆ ಬರೆದ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ ಪಿಯುಸಿ ಪರೀಕ್ಷೆಯಲ್ಲೇ ಫೇಲ್‌ ಆಗಿದ್ದ ಆಘಾತಕಾರಿ ಸತ್ಯ ಇದೀಗ ಬೆಳಕಿಗೆ ಬಂದಿದೆ.

ಭಾಗ್ಯಶ್ರೀ (18) ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈಕೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಪರೀಕ್ಷೆ ರದ್ದಾದ ಕಾರಣ ಸಾವಿಗೆ ಶರಣಾಗಿದ್ದಾಳೆಂದು ಕುಟುಂಬಸ್ಥರು ಹೇಳಿದ್ದರು.

ದ್ವಿತೀಯ ಪಿಯುಸಿ ಫಲಿತಾಂಶ ಬಂದಾಗ ವಿದ್ಯಾರ್ಥಿನಿ ಭಾಗ್ಯಶ್ರೀ ತನಗೆ ಶೇ.92 ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರುವುದಾಗಿ ಹೆತ್ತವರ ಬಳಿ ಹೇಳಿಕೊಂಡಿದ್ದಳು.

ಮಗಳ ಮಾತನ್ನು ನಂಬಿದ್ದ ಪೋಷಕರು, ಆಕೆ ವೈದ್ಯಕೀಯ ಶಿಕ್ಷಣದ ಕನಸು ಹೊತ್ತು ನೀಟ್ ಪರೀಕ್ಷೆ ಬರೆಯಲು ಸಂಪೂರ್ಣ ಬೆಂಬಲ ನೀಡಿದ್ದರು. ಇತ್ತೀಚೆಗಷ್ಟೇ ಭಾಗ್ಯಶ್ರೀ ನೀಟ್ ಪರೀಕ್ಷೆಯನ್ನೂ ಬರೆದಿದ್ದಳು.

ಈಗ ಲಭ್ಯವಾಗಿರುವ ಮಾರ್ಕ್ಸ್‌ಕಾರ್ಡ್ ಪ್ರಕಾರ, ಭಾಗ್ಯಶ್ರೀ ದ್ವಿತೀಯ ಪಿಯುಸಿಯ ಗಣಿತ ಮತ್ತು ಭೌತಶಾಸ್ತ್ರ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಳು. ಬಳಿಕ ಅವಳು ಭೌತಶಾಸ್ತ್ರ ಮತ್ತು ಗಣಿತ ಮರು ಪರೀಕ್ಷೆ ಬರೆದಿದ್ದಳು.

ಭೌತಶಾಸ್ತ್ರದಲ್ಲಿ 51 ಅಂಕ ಪಡೆದು ತೇರ್ಗಡೆಯಾಗಿದ್ದರೆ. ಗಣಿತದಲ್ಲಿ 24 ಅಂಕ ಪಡೆದು ಅನುತ್ತೀರ್ಣಗೊಂಡಿದ್ದಳು. ಕಾಲೇಜಿನಿಂದ ನೀಡಲಾಗುವ 20 ಇಂಟರ್ನಲ್ (ಆಂತರಿಕ) ಅಂಕಗಳನ್ನು ಸೇರಿಸಿಯೂ ಆಕೆ ಗಣಿತದಲ್ಲಿ ಕೇವಲ 24 ಅಂಕ ಪಡೆದಿದ್ದಳು ಎಂದು ತಿಳಿದುಬಂದಿದೆ.

ದ್ವಿತೀಯ ಪಿಯುಸಿಯ ಪರೀಕ್ಷೆ-2 ರಫಲಿತಾಂಶ ಮೇ 21 ರಂದು ಪ್ರಕಟವಾಗಿತ್ತು. ಪಿಯುಸಿ ಫಲಿತಾಂಶದಲ್ಲಿ ತಾನು ಫೇಲ್ ಆಗಿರುವ ವಿಷಯ ಮನೆಯವರಿಗೆ ಗೊತ್ತಾದರೆ, ಎಲ್ಲಿ ಬೈಯುತ್ತಾರೋ ಅಥವಾ ತಮ್ಮ ನಿರೀಕ್ಷೆ ಸುಳ್ಳಾಯಿತಲ್ಲ ಎಂಬ ತೀವ್ರ ಮನಸ್ತಾಪ ಹಾಗೂ ಭಯದಿಂದಲೇ ವಿದ್ಯಾರ್ಥಿನಿ ಆತ್ಮಹತ್ಯೆಯ ಹಾದಿ ಹಿಡಿದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್